DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!
ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಪರಪ್ಪನ ಅಗ್ರಹಾರ ಜೈಲಿನಿಂದ ಅಪರಾಧಿ ಶಂಕರ್ ನನ್ನು ಬಿಡುಗಡೆ ಮಾಡಿಸಿದ್ದ ಪಸ್ತುತ ಕಲಬುರಗಿ ಉತ್ತರ ವಲಯ ಕಾರಾಗೃಹ ಇಲಾಖೆ ಡಿಐಜಿಯಾಗಿರುವ ಸೋಮಶೇಖರ್ ಅವರನ್ನು ಸೋಮವಾರ ಬಂಧಿಸಲಾಗಿದೆ.

ಬೆಂಗಳೂರು: 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯ ಪತ್ನಿ ಮೇಲಿನ ಆಸೆಗಾಗಿ ನಕಲಿ ಜಾಮೀನು ಕೊಡಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮಾಜಿ ಡಿಐಜಿ ಎಂ. ಸೋಮಶೇಖರ್ ಅವರ ಕಾಮಕಾಂಡ ಬಟಾಬಯಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಪರಪ್ಪನ ಅಗ್ರಹಾರ ಜೈಲಿನಿಂದ ಅಪರಾಧಿ ಶಂಕರ್ ನನ್ನು ಬಿಡುಗಡೆ ಮಾಡಿಸಿದ್ದ ಪಸ್ತುತ ಕಲಬುರಗಿ ಉತ್ತರ ವಲಯ ಕಾರಾಗೃಹ ಇಲಾಖೆ ಡಿಐಜಿಯಾಗಿರುವ ಸೋಮಶೇಖರ್ ಅವರನ್ನು ಸೋಮವಾರ ಬಂಧಿಸಲಾಗಿದ್ದು, ತನಿಖೆಯಲ್ಲಿ ಡಿಐಜಿ ಕಾಮಕಾಂಡ ಬಟಾಬಯಲಾಗಿದೆ.
ಆರೋಪಿಗಳಾದ ಶ್ರೀಕಾಂತ್ ಹಾಗೂ ಡಿಐಜಿ ಸೋಮಶೇಖರ್ ಇಬ್ಬರೂ ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಸುಪ್ರೀಂಕೋರ್ಟ್‌ನ ಆದೇಶ ನಕಲು ಮಾಡಿ ಕೈದಿ ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ತನಿಖೆಯಿಂದ ತಿಳಿದು ಬಂದಿದೆ.
ಅಲ್ಲದೇ ತನಿಖೆ ವೇಳೆ ಶಂಕರ್ ಪತ್ನಿಗೆ ಡಿಐಜಿ ಸೋಮಶೇಖರ್ ವಿಡಿಯೋ ಕರೆ ಮಾಡಿರೋದು ಪತ್ತೆಯಾಗಿದ್ದು, ವಿಡಿಯೋ ಕಾಲ್‌ನಲ್ಲಿ ವಿವಸ್ತ್ರವಾಗುವಂತೆ ಹೇಳಿರುವುದು ದೃಢಪಟ್ಟಿದೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು, ವಿಡಿಯೋವನ್ನು ವಶಕ್ಕೆ ಪಡೆದು ಎಫ್ಎಸ್ಎಲ್‌ಗೆ ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



