ರಾಜ್ಯ

ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್, ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ದುರ್ಮರಣ!

ಮೃತರನ್ನು ಕುಷ್ಟಗಿ ಮೂಲದ ಶಶಿಧರ್(22), ಮಂಜುನಾಥ್ (22) ಹಾಗೂ ಬಸವರಾಜ್(21) ಎಂದು ಗುರುತಿಸಲಾಗಿದೆ.

ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್, ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ದುರ್ಮರಣ!
ಅಪಘಾತಕ್ಕೀಡಾದ ಕಾರು
Published On :

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಮಂಗಳವಾರ ಚಲಿಸುತ್ತಿದ್ದ ಲಾರಿಯ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದ್ದು, ಹಿಂದೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಕುಷ್ಟಗಿ ಮೂಲದ ಶಶಿಧರ್(22), ಮಂಜುನಾಥ್ (22) ಹಾಗೂ ಬಸವರಾಜ್(21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ಇಬ್ಬರು ಗಾಯಗೊಂಡಿದ್ದು, ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದೆ ಚಲಿಸುತ್ತಿದ್ದ ಲಾರಿ ಟೈರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎಡಕ್ಕೆ ತಿರುಗಿದೆ. ಈ ವೇಳೆ ಹಿಂದೆ ಸಾಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಲಾರಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.