ರಾಜ್ಯ

ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ತಾಯಿ -ಮಗು ಸಾವು; ಹಲವರಿಗೆ ಗಾಯ

ಘಟನೆಯಿಂದ ಒಂದೇ ಕುಟುಂಬದ ಹಲವು ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಲಕ್ಷ್ಮಮ್ಮ ಹಾಗೂ ಅವರ ಮೂರು ವರ್ಷದ ಅವಳಿ ಮಕ್ಕಳಲ್ಲಿ ಒಬ್ಬರು ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ತಾಯಿ -ಮಗು ಸಾವು; ಹಲವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟ ದುರಂತದಲ್ಲಿ ತಾಯಿ ಹಾಗೂ ಮೂರು ವರ್ಷದ ಮಗು ಮೃತಪಟ್ಟಿದ್ದಾರೆ.

ಘಟನೆಯಿಂದ ಒಂದೇ ಕುಟುಂಬದ ಹಲವು ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಲಕ್ಷ್ಮಮ್ಮ ಹಾಗೂ ಅವರ ಮೂರು ವರ್ಷದ ಅವಳಿ ಮಕ್ಕಳಲ್ಲಿ ಒಬ್ಬರು ಎಂದು ಗುರುತಿಸಲಾಗಿದೆ.

ಸ್ಫೋಟದಲ್ಲಿ ಲಕ್ಷ್ಮಮ್ಮ ಅವರಿಗೆ ಸುಮಾರು ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದವು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮನೆಯ ಬಾಗಿಲು ತೆರೆದು ಅಡುಗೆ ಮಾಡಲು ಸ್ಟೌವ್ ಹಚ್ಚಿದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಸಿಲಿಂಡರ್‌ನಲ್ಲಿ ಲೀಕೇಜ್ ಸಮಸ್ಯೆ ಇತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ಸ್ಫೋಟದ ತೀವ್ರತೆಗೆ ಕರಿಲಿಂಗಪ್ಪ, ಅವರ ಪತ್ನಿ ಲಕ್ಷ್ಮಮ್ಮ ಹಾಗೂ ನಾಲ್ವರು ಮಕ್ಕಳು ಗಾಯಗೊಂಡಿದ್ದರು. ಕೂಡಲೇ ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿತ್ತು.

ರಾಯಚೂರು ಮೂಲದ ಕರಿಲಿಂಗಪ್ಪ ಅವರ ಕುಟುಂಬ ವಿನಾಯಕ ಲೇಔಟ್‌ನಲ್ಲಿ ಕಳೆದ 25 ವರ್ಷಗಳಿಂದ ವಾಸವಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.