ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ; Video Viral
ಸ್ಫೋಟದ ವೇಳೆ ನೆಲಕ್ಕೆ ಬಿದ್ದ ಪರಿಣಾಮ, ಓರ್ವ ಪಾದಚಾರಿಗೆ ಗಾಯಗಳಾಗಿವೆ. ಅವರ ಕೈಗಳಿಗೆ ತೀವ್ರ ಸುಟ್ಟ ಗಾಯಗಳಾದರೆ, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾಳೆ.

ಬೆಂಗಳೂರು: ಈಶಾನ್ಯ ಬೆಂಗಳೂರಿನ ಬಾಗಲೂರು ಕ್ರಾಸ್ ಸಮೀಪದ ಅಮೆಜಾನ್ ಕಚೇರಿಯ ಹೊರಭಾಗದ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್ ಬಾಕ್ಸ್‌ವೊಂದು ಬುಧವಾರ ಬೆಳಗ್ಗೆ 9.49ರ ಸುಮಾರಿಗೆ ಸ್ಫೋಟಗೊಂಡಿದ್ದು, ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರು ಗಾಯಗೊಂಡಿದ್ದಾರೆ.
ಸ್ಫೋಟದ ವೇಳೆ ನೆಲಕ್ಕೆ ಬಿದ್ದ ಪರಿಣಾಮ, ಓರ್ವ ಪಾದಚಾರಿಗೆ ಗಾಯಗಳಾಗಿವೆ. ಅವರ ಕೈಗಳಿಗೆ ತೀವ್ರ ಸುಟ್ಟ ಗಾಯಗಳಾದರೆ, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾಳೆ.
ಅಮೆಜಾನ್ ಕಚೇರಿ ಆವರಣದ ಗೇಟ್ ನಂ. 3ರ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.
ಗಾಯಗೊಂಡವರನ್ನು ಮೊಹಮ್ಮದ್ ಅಫ್ರೋಜ್ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಮಿಥುನ್ ಕುಮಾರ್ ಸತೇಡ್, ಇದು ಅಮೆಜಾನ್ ಕಚೇರಿಯ ಗೇಟ್ ನಂ. 3ರ ಬಳಿ ನಡೆದಿದೆ. ಬಾಗಲೂರು ಕ್ರಾಸ್ ಸಮೀಪ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ಅಫ್ರೋಜ್ ಗಾಯಗೊಂಡಿದ್ದಾರೆ. ಅವರು ಸುರಕ್ಷಿತವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹಠಾತ್ ಸಂಭವಿಸಿದ ಸ್ಫೋಟದ ದೃಶ್ಯವು ಘಟನೆಯನ್ನು ಕಣ್ಣಾರೆ ಕಂಡ ಅರುಣ್ ಜಿ ಅವರ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.
ನನ್ನ ಡ್ಯಾಶ್‌ಕ್ಯಾಮ್‌ನಲ್ಲಿ ಘಟನೆ ಸೆರೆಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ನಾನು ಕಾರಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ನನ್ನ ಮಕ್ಕಳು ಕಾರಿನೊಳಗಿದ್ದರು ಎಂದು ಅರುಣ್ ಜಿ ತಿಳಿಸಿದ್ದಾರೆ.
ವಿದ್ಯುತ್ ದೋಷಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಸುರಕ್ಷತೆಯ ಆತಂಕ
ಈ ಸ್ಫೋಟವು ಪಾದಚಾರಿ ಮಾರ್ಗಗಳಲ್ಲಿರುವ, ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳು ಮತ್ತು ರಸ್ತೆಯನ್ನು ಬಳಸುವ ಇತರ ದುರ್ಬಲ ವರ್ಗದವರು ಹೆಚ್ಚಾಗಿ ಓಡಾಡುವ ಪ್ರದೇಶಗಳಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳ ಸುರಕ್ಷತೆಯ ಕುರಿತು ಆತಂಕವನ್ನು ಮರುಕಳಿಸುವಂತೆ ಮಾಡಿದೆ.
2022ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ಇದೇ ರೀತಿಯ ಟ್ರಾನ್ಸ್‌ಫಾರ್ಮರ್ ಸ್ಫೋಟವೊಂದರಲ್ಲಿ, ತಂದೆ ಮತ್ತು ಮಗಳು ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



