ರಾಜ್ಯ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಆಕ್ಷೇಪಾರ್ಹ ಟ್ವೀಟ್‌ ಗಳನ್ನು ಮಾಡುವ Alt News ಸಹಸ್ಥಾಪಕ ಮುಹಮ್ಮದ್ ಜುಬೈರ್ ಗೆ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಹಲ್ಲೆ ಮಾಡಲಾಗಿದೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral
ಮುಹಮ್ಮದ್ ಜುಬೈರ್
Published On :

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಆಕ್ಷೇಪಾರ್ಹ ಟ್ವೀಟ್‌ ಗಳನ್ನು ಮಾಡುವ Alt News ಸಹಸ್ಥಾಪಕ ಮುಹಮ್ಮದ್ ಜುಬೈರ್ ಗೆ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಹಲ್ಲೆ ಮಾಡಲಾಗಿದೆ ಎಂಬ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಟ್ವೀಟರ್ ನಲ್ಲಿ ಹಲವು ವಿಡಿಯೋವನ್ನು ಶೇರ್ ಮಾಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಭಾರಿ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಮುಹಮ್ಮದ್ ಜುಬೈರ್ ಸಹ ಭಾಗವಹಿಸಿದ್ದರು ಎನ್ನಲಾಗಿದೆ. ಈ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್, ಯುಟ್ಯೂಬರ್ ಧ್ರುವ್ ರಾಠಿ, ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿದಂತೆ ಹಲವರು ಭಾಗವಹಿಸಿದ್ದರು.

ಜುಬೇರ್‌ 2018ರಲ್ಲಿ ಹಾಗೂ 2020ರಲ್ಲಿ ಮಾಡಿದ ಎರಡು ಟ್ವೀಟ್‌ಗಳು ವಿವಾದ ಸೃಷ್ಟಿಸಿದ್ದವು. ಇದಕ್ಕೆ ಸಂಬಂಧಿಸಿದಂತೆ 2020ರಲ್ಲಿ ಈತನನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.