ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ
ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ...

ಬೆಂಗಳೂರು: ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿಪಕ್ಷಗಳ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ.
ನರೇಂದ್ರ ಮೋದಿ 'ಮತಗಳ್ಳತನ' ಮಾಡಿ ಪ್ರಧಾನಿ ಆದರು ಎಂಬ CJP ಆರೋಪವು ಮನುವಾದಿಗಳು ಮತ್ತು SIR ವಿರೋಧಿಗಳು ಯಾವುದೇ ಆಧಾರವಿಲ್ಲದೆ ಮಾಡುವ ಆರೋಪಗಳಿಗೆ ಮತ್ತೊಂದು ಉದಾಹರಣೆಯಾಗಿದೆ ಎಂದು ಚೇತನ್ ಅಹಿಂಸಾ ಹೇಳಿದ್ದಾರೆ. ಮತಗಳ್ಳತನವೇ ಆಗಿದ್ದರೆ ಕೇರಳದ ಕಾಂಗ್ರೆಸ್ ಮುಖ್ಯಮಂತ್ರಿ ಮತ್ತು ತಮಿಳುನಾಡಿನ TVK ಮುಖ್ಯಮಂತ್ರಿ ಕೂಡ ‘ಮತಗಳ್ಳರೇ’? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಕೈಯಲ್ಲಿ ಸುತ್ತಿಗೆ ಒಂದೇ ಇದ್ದರೆ, ಎಲ್ಲವೂ ಮೊಳೆಯಂತೆ ಕಾಣುತ್ತದೆ. ಅದೇ ರೀತಿ, ನಿಮ್ಮ ಮನಸ್ಸಿನಲ್ಲಿ ಬಿಜೆಪಿಯನ್ನು ವಿರೋಧಿಸುವ ಒಂದೇ ಆಲೋಚನೆ ಇದ್ದರೆ, ಪ್ರತಿಯೊಂದೂ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಜೆಂಡಾಗೆ ಹೊಂದಿಕೆಯಾಗದ ಪ್ರತಿಯೊಂದು ಚುನಾವಣಾ ಫಲಿತಾಂಶವೂ 'ಮತಗಳ್ಳತನ' ಎನಿಸುತ್ತದೆ. ಮತ್ತೊಂದು ಕಾಕ್ರೋಚ್ ಸುಳ್ಳೇ? ಬಹುಶಃ ಹೌದು. ಎಂದಿನಂತೆ ಕಾಕ್ರೋಚ್ ನ ಅಜ್ಞಾನವೇ? ಖಂಡಿತ ಎಂದು ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



