ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದ ಶಿಫ್ಟ್!
ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ್ದ ಬೆನ್ನಲ್ಲೇ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ಕುಮಾರ್ ಅವರು ಶುಕ್ರವಾರ ಈ ಆದೇಶ ಹೊರಡಿಸಿದ್ದಾರೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಡಿಜಿಪಿ ಅಲೋಕ್ ಕುಮಾರ್ ಅವರು ಸೂಚಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರನ್ನು ಶಿಫ್ಟ್ ಮಾಡುವ ಬಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ಮಾಡಲಾಗಿದೆ. ಅಲ್ಲದೆ ಜೈಲು ಮುಖ್ಯ ಅಧೀಕ್ಷಕರಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಪ್ರಜ್ವಲ್ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಯಾವಾಗ ಬೇಕಾದ್ರೂ ಎಸ್ಕಾರ್ಟ್ ಮೂಲಕ ಶಿಫ್ಟ್ ಮಾಡಬಹುದು. ಹೀಗಾಗಿ ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು. ಇದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಸಿಸಿಬಿ ಪೊಲೀಸರು ಈ ಕೈದಿಗಳಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್ ಡ್ರೈವ್ ಮತ್ತು ನೋಟ್ಬುಕ್ ಅನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



