₹8.3 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ; ಕರೆಂಟ್ ಹೋಗಿ ಮೊಬೈಲ್ ಟಾರ್ಚ್ ಲೈಟ್ ನಲ್ಲಿ ರೋಗಿಗಳಿಗೆ ಚಿಕಿತ್ಸೆ; Video
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿ ಸುಮಾರು 8.30 ಕೋಟಿ ರೂ ವೆಚ್ಚದ ಸುಸಜ್ಜಿತ 30 ಹಾಸಿಗೆಯ ಉತ್ತಮ ಕಟ್ಟಡ ನಿರ್ಮಾಣವಾಗಿದೆ.

ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ಮೊಬೈಲ್ ಟಾರ್ಚ್ ಹಾಕಿ ಚಿಕಿತ್ಸೆ ನೀಡಿದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ನೂತನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು ಇದಕ್ಕೆ ಸಂಬಂಧಪಟ್ಟ ವಿಡಿಯೊ ಹರಿದಾಡುತ್ತಿದೆ.
ಕರೆಂಟ್ ಇಲ್ಲದೇ ಕತ್ತಲು
ಮಂಗಳವಾರ ದೇವರಹಿಪ್ಪರಗಿ ಪಟ್ಟಣದ ಇಂಡಿ ರಸ್ತೆಯಲ್ಲಿ ಬೊಲೆರೋ, ಟಂಟಂ ಹಾಗೂ ಮೋಟಾರ್ ಸೈಕಲ್ ಅಪಘಾತದಲ್ಲಿ ಸುಮಾರು 10 ಜನರಿಗೆ ಗಾಯಗಳಾಗಿದ್ದವು. ಅದರಲ್ಲಿ 5 ಜನರಿಗೆ ಗಂಭೀರ ಗಾಯಗಳಾಗಿತ್ತು. ಹೀಗಾಗಿ ತುರ್ತು ಚಿಕಿತ್ಸೆಗೆ ರೋಗಿಗಳನ್ನು ದೇವರಹಿಪ್ಪರಗಿಯ ನೂತನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೇ ಕತ್ತಲು ಆವರಿಸಿತ್ತು. ಇದರಿಂದಾಗಿ ಗ್ರಾಮಸ್ಥರು, ಗಾಯಾಳುಗಳು ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದರು.
ಈ ವೇಳೆ ಗೊಂದಲದ ವಾತಾವರಣ ಉಂಟಾಗಿ ಮೊಬೈಲ್ ಟಾರ್ಚ್ ಮೂಲಕ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಬೇಕಾದ ಅನಿವಾರ್ಯತೆ ಎದುರಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಯಿತು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿ ಸುಮಾರು 8.30 ಕೋಟಿ ರೂ ವೆಚ್ಚದ ಸುಸಜ್ಜಿತ 30 ಹಾಸಿಗೆಯ ಉತ್ತಮ ಕಟ್ಟಡ ನಿರ್ಮಾಣವಾಗಿದೆ. ಇದನ್ನು ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹಾಗೂ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಲೋಕಾರ್ಪಣೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



