ಕಲಬುರಗಿ: ಮಸೀದಿ ಮೇಲೆ ನಿಂತು ಬಿಯರ್ ಕುಡಿದ ಕಾನ್ಸ್‌ಟೇಬಲ್; ವಿಡಿಯೋ ವೈರಲ್ ಬೆನ್ನಲ್ಲೇ ಸಸ್ಪೆಂಡ್
ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಪೇದೆ ಹಣಮಂತ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಪೊಲೀಸ್ ಠಾಣೆಯ ಪೊಲೀಸ್ ಪೇದೆಯೊಬ್ಬರು ಕರ್ತವ್ಯದಲ್ಲಿದ್ದಾಗಲೇ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್ ಕುಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಪೇದೆ ಹಣಮಂತ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಣಮಂತ ಅವರು ಹರಸೂರು ಗ್ರಾಮದ ಮಸೀದಿ ಮೇಲೆ ನಿಂತು ಬಿಯರ್ ಕುಡಿದಿದ್ದರು. ಇದನ್ನು ಗ್ರಾಮಸ್ಥರು ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್ ಆದ ಬೆನ್ನಲ್ಲೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.
ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹರಸೂರು ಗ್ರಾಮದಲ್ಲಿ ಗಲಾಟೆಯಾಗಿತ್ತು. ಆ ಹಿನ್ನಲೆಯಲ್ಲಿ ಬಂದೋಬಸ್ತ್‌ಗಾಗಿ ಹಣಮಂತ ಅವರನ್ನು ಮಸೀದ ಬಳಿ ನಿಯೋಜನೆ ಮಾಡಲಾಗಿತ್ತು. ಆದರೆ ಕರ್ತವ್ಯದಲ್ಲಿದ್ದಾಗಲೇ ಅವರು ಬಿಯರ್ ಕುಡಿದಿದ್ದರು. ಮಧ್ಯ ಸೇವಿಸಿರೋದು ಧೃಡಪಟ್ಟ ಹಿನ್ನಲೆಯಲ್ಲಿ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



