ಮತಗಳ್ಳತನದ ಆರೋಪದ ಬಗ್ಗೆ ಮೌನವೇಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಮತಗಳ್ಳತನದ ಆರೋಪ ಹಾಗೂ SIR ಪ್ರಕ್ರಿಯೆ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಜೀ ಮೌನ ವಹಿಸಿರುವುದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಬೆಂಗಳೂರು: ಮತಗಳ್ಳತನದ ಆರೋಪ ಹಾಗೂ SIR ಪ್ರಕ್ರಿಯೆ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಜೀ ಮೌನ ವಹಿಸಿರುವುದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಭಾರತದ ಆರ್ಥಿಕತೆ, ವಿದೇಶಾಂಗ ನೀತಿ, ಧರ್ಮ, ಸಾಮಾಜಿಕ ಮೌಲ್ಯಗಳು, ವಿಜ್ಞಾನದ ವ್ಯಾಖ್ಯಾನ ಹಾಗೂ ಭಾರತೀಯರು ಎಷ್ಟು ಮಕ್ಕಳನ್ನು ಹೊಂದಬೇಕು ಎಂಬ ವಿಚಾರಗಳ ಬಗ್ಗೆಯೂ RSS ಅಭಿಪ್ರಾಯ ಹೊಂದಿದೆ.
ಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂಬ ಹೇಳಿಕೆಗಳಿಂದ ಹಿಡಿದು ಪೌರಾಣಿಕ ಕಥೆಗಳನ್ನು ವೈಜ್ಞಾನಿಕ ಸತ್ಯವೆಂದು ಬಿಂಬಿಸುವವರೆಗೂ ಯಾವುದೇ ವಿಷಯವೂ ಅವರ ಪರಿಣತಿಯ ವ್ಯಾಪ್ತಿಯಿಂದ ಹೊರತಾಗಿಲ್ಲ ಎಂಬಂತೆ ವರ್ತಿಸುತ್ತಾರೆ. ಆದರೆ ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಮತಗಳ್ಳತನದ ಆರೋಪಗಳ ವಿಚಾರ ಬಂದಾಗ ಮಾತ್ರ ತಮ್ಮ ಉಪನ್ಯಾಸಗಳು ನಿಂತುಹೋಗುತ್ತವೆ ಎಂದು ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರನ್ನು ಪೋಸ್ಟ್ ನಲ್ಲಿ ಟೀಕಿಸಿದ್ದಾರೆ.
ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ? ಚುನಾವಣಾ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆಯ ಬಗ್ಗೆ ಪ್ರಶ್ನೆಗಳು ಎದ್ದಾಗ ಈ ಮೌನ ಏಕೆ?. ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪ ಹಾಗೂ ಚುನಾವಣಾ ಪ್ರಕ್ರಿಯೆಯ ಹೊಣೆಗಾರಿಕೆ ವಿಚಾರವಾಗಿ ವಿರೋಧ ಪಕ್ಷಗಳು ಮತ್ತು ಕೇಂದ್ರ ಸರ್ಕಾರದ ನಡುವೆ ರಾಜಕೀಯ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ ಪ್ರಿಯಾಂಕ್ ಖರ್ಗೆ ಈ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



