ರಾಜ್ಯ

ದುರ್ಗಾಮಾತಾ ದೌಡ್ ದೇವಿ ಮೆರವಣಿಗೆ ಮೇಲೆ ಟ್ರಕ್ ಹರಿದು ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ದುರ್ಗಾಮಾತಾ ದೌಡ್ ದೇವಿ ಮೆರವಣಿಗೆ ಮೇಲೆ ಟ್ರಕ್ ಹರಿದು ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!
ಅಪಘಾತ ನಡೆದ ಸ್ಥಳದಲ್ಲಿ ಕಂಡುಬಂದ ದೃಶ್ಯ
Published On :

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮನಗುತ್ತಿ ಮತ್ತು ಹತ್ತರಗಿ ಟೋಲ್ ಗೇಟ್ ಬಳಿ, 'ದುರ್ಗಾಮಾತಾ ದೌಡ್ ದೇವಿ' ಮೆರವಣಿಗೆಯ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿಗೆ ಭೇಟಿ ನೀಡಿ ಹುಂಚ್ಯಾನಟ್ಟಿ ಗ್ರಾಮಕ್ಕೆ ಮೆರವಣಿಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ದೇವಿಯ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕೊಂಡಯ್ಯಲಾಗುತ್ತಿತ್ತು. ಆಗ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಾವು-ನೋವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಪ್ರಕಾಶ್, ಮಹೇಶ್ ಮತ್ತು ದಾನೇಶ್ವರಿ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಘಟನೆಯು ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.