ರಾಜ್ಯ

ಕಾಂಗ್ರೆಸ್ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ, ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೊಲೀಸರ ವಶಕ್ಕೆ!

ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ, ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೊಲೀಸರ ವಶಕ್ಕೆ!
ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು
Published On :

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ JNU ಪ್ರೊಫೆಸರ್ ಅಂಗೋಂಚ ಬಿಮೋಲ್ ಅಕೋಯಿಜಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಕೇಂದ್ರ ಕಚೇರಿ ಕಡೆಗೆ ಮೆರವಣಿಗೆ ಯತ್ನಿಸಿದ ಬಿಜೆಪಿ ಮಹಿಳಾ ಮೋರ್ಚಾದ ಹಲವು ಸದಸ್ಯರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.

ಘಟನೆಯನ್ನು ಮುಚ್ಚಿಹಾಕಲು ಹಿರಿಯ ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ವಿಧಾನ ಪರಿಷತ್ ಸದಸ್ಯೆ (MLC) ಭಾರತಿ ಶೆಟ್ಟಿ ಮತ್ತಿತರ ಮಹಿಳಾ ನಾಯಕಿಯರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಭಿತ್ತಿಪತ್ರಗಳನ್ನು ಹಿಡಿದ ಪ್ರತಿಭಟನಾಕಾರರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಮೆರವಣಿಗೆ ಸಾಗುತ್ತಿದ್ದ ಮಾರ್ಗದಲ್ಲಿ ನಿಯೋಜಿಸಲಾಗಿದ್ದ ಪೊಲೀಸರು ಅವರನ್ನು ತಡೆದರು ಮತ್ತು ಬ್ಯಾರಿಕೇಡ್‌ ಗಳನ್ನು ಹಾಕಿ ತಡೆಗಟ್ಟಿದರು. ನಂತರ ಅವರನ್ನು ವಶಕ್ಕೆ ಪಡೆದು ಪೊಲೀಸ್ ಬಸ್‌ಗಳಲ್ಲಿ ಕರೆದೊಯ್ಯಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ ಶೆಟ್ಟಿ, ಮಣಿಪುರದ ಕಾಂಗ್ರೆಸ್ ಸಂಸದರು ಪ್ರಾಧ್ಯಾಪಕರಾಗಿದ್ದರೂ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ. 'ಗುರು' ಸ್ಥಾನದಲ್ಲಿದ್ದುಕೊಂಡು ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುವ ಮೂಲಕ ಅವರು ಅತ್ಯಂತ ಅವಮಾನಕರವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

ಅಂಗೋಂಚ ಬಿಮೋಲ್ ಅಕೋಯಿಜಾಮ್ ಅವರ ಈ ದುಷ್ಕೃತ್ಯದ ವಿರುದ್ಧ ಬಿಜೆಪಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು. ಕಾಂಗ್ರೆಸ್ ವರಿಷ್ಠರು ಆ ಸಂಸದರಿಗೆ ಬೆಂಬಲ ನೀಡುತ್ತಿದೆ ಎಂದೂ ಅವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.