ರಾಜ್ಯ

ಕಾರ್ಗಿಲ್​​ ಯುದ್ಧದ ಹುತಾತ್ಮ ಯೋಧನ ಪತ್ನಿ ಈಗ Karnataka Governor: Dr. Sudha Yadav ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ...

ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್​​ 16ರಂದು ಜನಿಸಿದ್ದ ಸುಧಾ ಯಾದವ್ ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಕೂಡ ಪಡೆದಿದ್ದಾರೆ.

ಕಾರ್ಗಿಲ್​​ ಯುದ್ಧದ ಹುತಾತ್ಮ ಯೋಧನ ಪತ್ನಿ ಈಗ Karnataka Governor: Dr. Sudha Yadav ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ...
ಪ್ರಧಾನಿ ನರೇಂದ್ರ ಮೋದಿ- ಸುಧಾ ಯಾದವ್ — online desk
Published On :

ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ಮಹಿಳಾ ನಾಯಕಿ, ಮಾಜಿ ಸಂಸದೆ ಸುಧಾ ಯಾದವ್ ನೇಮಕಗೊಂಡಿದ್ದಾರೆ.

ರಾಷ್ಟ್ರಪತಿ ಭವನದಿಂದ ಸೋಮವಾರ ನೇಮಕದ ಆದೇಶ ಪ್ರಕಟಿಸಲಾಗಿದೆ. ಸುಧಾ ಯಾದವ್​ ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರಾಗಿದ್ದಾರೆ. 1999-2002 ಅವಧಿಯಲ್ಲಿ ರಾಜ್ಯಪಾಲರಾಗಿದ್ದ V. S. Ramadevi ಅವರು ಕರ್ನಾಟಕದ ಮೊದಲ ರಾಜ್ಯಪಾಲರಾಗಿದ್ದರು.

ಸುಧಾ ಯಾದವ್​, ಅವರ ರಾಜಕೀಯ ಹಿನ್ನೆಲೆ ಬಗ್ಗೆ ಇಲ್ಲಿದೆ ಮಾಹಿತಿ:

ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್​​ 16ರಂದು ಜನಿಸಿದ್ದ ಸುಧಾ ಯಾದವ್ ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಕೂಡ ಪಡೆದಿದ್ದಾರೆ.

ಸುಧಾ ಯಾದವ್ ಅವರ ಪತಿ ಸುಖಬೀರ್ ಸಿಂಗ್ ಯಾದವ್ ಬಿಎಸ್‌ಎಫ್​ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದರು. 1999ರ ಕಾರ್ಗಿಲ್ ಯುದ್ಧದಲ್ಲಿ ಅವರು ಹುತಾತ್ಮರಾದರು. ಪತಿಯ ನಿಧನದ ಬಳಿಕ ಸುಧಾ ಯಾದವ್ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿದ್ದಾರೆ.

ಸುಧಾ ಯಾದವ್ ಅವರು ಭಾರತೀಯ ಜನತಾ ಪಕ್ಷದ ಹಿರಿಯ ಮಹಿಳಾ ನಾಯಕಿಯಾಗಿದ್ದು, ಮಾಜಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1994ರಿಂದ 2004ರವರೆಗೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಇವರು, ತಮ್ಮ ಮೊದಲ ಚುನಾವಣೆಯಲ್ಲೇ ಗಮನಾರ್ಹ ಗೆಲುವು ಸಾಧಿಸಿದ್ದರು. 1999ರ ಚುನಾವಣೆಯಲ್ಲಿ ಹರಿಯಾಣದ ಕಾಂಗ್ರೆಸ್ ನಾಯಕ ರಾವ್ ಇಂದ್ರಜಿತ್ ಸಿಂಗ್ ವಿರುದ್ಧ ಗೆಲುವು ಸಾಧಿಸಿದ್ದರು.

ಇನ್ನು ಸುಧಾ ಯಾದವ್ ಅವರು ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ನಿಧನದ ಬಳಿಕ ಪಕ್ಷದ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ನಾಯಕಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.