ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ತಕ್ಷಣವೇ ಆರೋಪಿ ಸ್ವಾಮೀಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಯುವತಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಯುವತಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ತಕ್ಷಣವೇ ಆರೋಪಿ ಸ್ವಾಮೀಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಖಾಕಿ ಪಡೆಯು ಈ ಕುರಿತು ಕಟ್ಟುನಿಟ್ಟಿನ ವಿಚಾರಣೆ ಮತ್ತು ತನಿಖಾ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ.
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ ಹಾಗೂ ವಂಚಿಸಿದ ಆರೋಪ ಸ್ವಾಮೀಜಿ ವಿರುದ್ಧ ಕೇಳಿಬಂದಿದೆ.
ನೂರಾರು ಕೋಟಿ ಜಮೀನು ಮಾಲೀಕತ್ವ ಹೊಂದಿರುವ ವೀರಶೈವ ಸಮುದಾಯದ ಹುಣಸಮಾರನಹಳ್ಳಿಮಠವು ವೀರಶೈವ ಲಿಂಗಾಯತ ಸಮುದಾಯದ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಠದ ಶಾಖಾ ಮಠವಾಗಿದೆ.
ಇದಕ್ಕೂ ಮೊದಲು, ಅಂದರೆ 2017ರ ಅಕ್ಟೋಬರ್‌ನಲ್ಲೂ ಸಹ ಸ್ವಾಮೀಜಿಯವರ ವಿರುದ್ಧ ಇದೇ ರೀತಿಯಾಗಿ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹಾಗೂ ದೈಹಿಕ ಸಂಪರ್ಕದ ಆರೋಪಗಳು ಕೇಳಿಬಂದಿದ್ದು, ಆ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ಮಠದ ಮುಂದೆ ಪ್ರತಿಭಟನೆ ನಡೆಸಿ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದರು.
ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಮೇಲಿನ ವಿವಾದಗಳ ಹಿನ್ನೆಲೆ ನೋಡುವುದಾದರೆ, ಇದು ಮೊದಲ ಬಾರಿಗೆ ಕೇಳಿಬಂದಿರುವ ಆರೋಪವಲ್ಲ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹುಣಸಮಾರನಹಳ್ಳಿ ಮಠವು ಸುಮಾರು 1500ಕ್ಕೂ ಅಧಿಕ ಎಕರೆ ಅತ್ಯಮೂಲ್ಯ ಜಮೀನನ್ನು ಹೊಂದಿರುವ ಅತ್ಯಂತ ಶ್ರೀಮಂತ ಮಠಗಳಲ್ಲಿ ಒಂದಾಗಿದ್ದು, ಇದರ ಆಸ್ತಿ ಹಾಗೂ ಜಮೀನಿಗೆ ಸಂಬಂಧಿಸಿದ ವಿವಾದಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿರುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



