ರಾಜ್ಯ

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ, ಕನ್ನಾಳೆಗೆ ಅಕ್ಟೋಬರ್ 15 ರಿಂದ 20 ರವರೆಗೆ ಬೀದರ್​​ಗೆ ತೆರಳಲು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...
ಬಸವರಾಜ್ ಕನ್ನಾಳೆ
Published On :

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದ ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆಗೆ ಹೈಕೋರ್ಟ್ ಸೋಮವಾರ ಐದು ದಿನಗಳ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಕನ್ನಾಳೆ ಅವರು ಹೆಣ್ಣುಮಗುವಿನ ತಂದೆಯಾಗಿದ್ದು, ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ, ಕನ್ನಾಳೆಗೆ ಅಕ್ಟೋಬರ್ 15 ರಿಂದ 20 ರವರೆಗೆ ಬೀದರ್​​ಗೆ ತೆರಳಲು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಕನ್ನಾಳೆ ಪರ ಹಿರೊಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದರು. ಕನ್ನಾಳೆ ಅವರ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 12 ದಿನದ ಮಗುವಿಗೆ ನಾಮಕರಣದ ಅಗತ್ಯವಿದೆ. ಹೀಗಾಗಿ ಮಾನವೀಯತೆ ಮೇಲೆ ಒಂದು ವಾರ ಜಾಮೀನು ನೀಡುವಂತೆ ಮನವಿ ಮಾಡಿದರು.

ಇತ್ತ ಸರ್ಕಾರದ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ಪ್ರತಿವಾದ ಮಂಡಿಸಿದ್ದು, ಕನ್ನಾಳೆ ಹಲವು ಅಭ್ಯರ್ಥಿಗಳಿಂದ ಹಣ ಸಂಗ್ರಹಿಸಿದ್ದಾನೆ. ಸಿಐಡಿ ಕಸ್ಟಡಿಯಲ್ಲಿಯೇ ಬೀದರ್‌ಗೆ ತೆರಳಲು ಷರತ್ತು ವಿಧಿಸಬೇಕು ಎಂದು ವಾದಿಸಿದ್ದರು.

ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ, ಅ.15ರಿಂದ ಅ.20ರವರೆಗೆ ಬಸವರಾಜ ಕನ್ನಾಳೆಗೆ ಷರತ್ತಿನ ಮಧ್ಯಂತರ ಜಾಮೀನು ನೀಡಿದ್ದು, ಪೊಲೀಸರೇ ಎಸ್ಕಾರ್ಟ್‌ನಲ್ಲಿ ಕರೆದೊಯ್ದು ಕರೆತರಲು ಸೂಚಿಸಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.