ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್: ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲುಪಿದ ಬಳಿಕ ದಿಢೀರ್ ವಾಪಸ್ ಬೆಂಗಳೂರಿಗೆ ಮರಳಿದ್ದಾರೆ.

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲುಪಿದ ಬಳಿಕ ದಿಢೀರ್ ವಾಪಸ್ ಬೆಂಗಳೂರಿಗೆ ಮರಳಿದ್ದಾರೆ.
ಸಿಎಆರ್ ಎಸ್ಕಾರ್ಟ್ ಪೊಲೀಸರು ಬಿಗಿ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಕರೆದೊಯ್ಯುತ್ತಿದ್ದರು. ವಾಹನ ತುಮಕೂರು ತಲುಪುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಬೆಂಗಾವಲು ಪಡೆಗೆ ತುರ್ತು ಕರೆ ಬಂದಿದೆ. ಮೇಲಧಿಕಾರಿಗಳ ಸೂಚನೆಯ ಮೇರೆಗೆ ಸಿಎಆರ್ ಸಿಬ್ಬಂದಿ ವಾಹನವನ್ನು ತಕ್ಷಣವೇ ತಿರುಗಿಸಿ, ರಾತ್ರಿಯೇ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ.
ಸದ್ಯ ಎರಡು ಪ್ರಕರಣಗಳ ಟ್ರಯಲ್ ನಡೆಯುತ್ತಿದ್ದು, ಜನಪತ್ರಿನಿಧಿಗಳ ವಿಶೇಷ ನ್ಯಾಯಲಯದಲ್ಲಿ ನಡೆಯುತ್ತಿರುವ ಟ್ರಯಲ್ ವೇಳೆ ಕೆಲ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಖುದ್ದು ಕೋರ್ಟ್‌ನಲ್ಲಿ ಹಾಜರಿರಬೇಕು. ಈ ಹಿನ್ನೆಲೆಯಲ್ಲಿ ಆತನನ್ನು CAR ಎಸ್ಕಾರ್ಟ್ ಸಿಬ್ಬಂದಿ ವಾಪಸ್ಸು ಪರಪ್ಪನ ಅಗ್ರಹಾರಕ್ಕೆ ಕರೆತಂದಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದ ಶಿಫ್ಟ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


