ರಾಜ್ಯ

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೈಬಿಟ್ಟು ಮತ್ತಿಬ್ಬರನ್ನು ಸೇರಿಸಿಕೊಳ್ಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!
ಡಿಜಿಪಿ ಅಲೋಕ್
Published On :

ನವದೆಹಲಿ: ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೈಬಿಟ್ಟು ಮತ್ತಿಬ್ಬರನ್ನು ಸೇರಿಸಿಕೊಳ್ಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. SIT ಮುಖ್ಯಸ್ಥರಾಗಿದ್ದ DGP ಅಲೋಕ್ ಕುಮಾರ್ ಹಾಗೂ ಡಿಐಜಿ ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರ SIT ರಚಿಸಿ ಅಧಿಕಾರಿಗಳನ್ನು ನೇಮಕ ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಬ್ಬರು ಅಧಿಕಾರಿಗಳ ಬದಲು ಹೊಸ ಅಧಿಕಾರಿಗಳ ಹೆಸರನ್ನು ಹೈಕೋರ್ಟ್‌ಗೆ ಸಲ್ಲಿಸಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಎಸ್‌ಐಟಿ ಮುಖ್ಯಸ್ಥರಾಗಿರುವ ಅಲೋಕ್ ಕುಮಾರ್ ಅವರ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪಗಳಿವೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಡುವಂತೆ ಮನವಿ ಮಾಡಲಾಗಿತ್ತು. ಅಲ್ಲದೆ ಎಸ್‌ಐಟಿ ನೇತೃತ್ವಕ್ಕೆ ಐಜಿಪಿ ಶ್ರೇಣಿಯ ಅಧಿಕಾರಿಗಳಾದ ಲಾಭೂರಾಮ್, ಚೇತನ್ ಸಿಂಗ್ ರಾಥೋಡ್ ಸೇರಿದಂತೆ ಐದು ಹೊಸ ಅಧಿಕಾರಿಗಳ ಪಟ್ಟಿಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇದಕ್ಕೆ ಅಭ್ಯರ್ಥಿಗಳ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಲೋಕ್ ಕುಮಾರ್ ಅವರು ಫೋನ್ ಟ್ಯಾಪಿಂಗ್ ಪ್ರಕರಣದಿಂದ ಈಗಾಗಲೇ ಮುಕ್ತರಾಗಿದ್ದಾರೆ. ಇದೇ ಸರ್ಕಾರ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡಿತ್ತು. ಈಗ ಸರ್ಕಾರಕ್ಕೆ ಬೇಕಾದ ಅಧಿಕಾರಿಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ. ನಮಗೆ ಸರ್ಕಾರದ ಮೇಲೆ ನಂಬಿಕೆಯಿಲ್ಲ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟುಹಿಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.