ರಾಜ್ಯ

ಸೀನಿಯರ್ ಕಿರುಕುಳ: ನಿವೃತ್ತಿಗೆ 6 ತಿಂಗಳು ಇರುವಾಗಲೇ IPS ಅಧಿಕಾರಿ ಎಸ್. ರವಿ ದಿಢೀರ್​​ ರಾಜೀನಾಮೆ!

ಸದ್ಯ ಕೆಎಸ್ಆರ್​ಪಿಯಲ್ಲಿ ಎಡಿಜಿಪಿ ಆಗಿರೋ ಎಸ್ ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಗೆ ಕಾರಣ ಏನು ಎಂಬ ಕುತೂಹಲ ಮೂಡಿಸಿದೆ.

ಸೀನಿಯರ್ ಕಿರುಕುಳ: ನಿವೃತ್ತಿಗೆ 6 ತಿಂಗಳು ಇರುವಾಗಲೇ IPS ಅಧಿಕಾರಿ ಎಸ್. ರವಿ ದಿಢೀರ್​​ ರಾಜೀನಾಮೆ!
ಎಸ್.ರವಿ
Published On :

ಬೆಂಗಳೂರು: ರಾಜ್ಯದ ಆಡಳಿತ ವರ್ಗದಲ್ಲಿ ಮಹತ್ವದ ಬದಲಾವಣೆಗಳು ನಡೆಯುತ್ತಿದ್ದು, ಇದೀಗ ಐಪಿಎಸ್ ಅಧಿಕಾರಿ ಎಸ್ ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಸದ್ಯ ಕೆಎಸ್ಆರ್​ಪಿಯಲ್ಲಿ ಎಡಿಜಿಪಿ ಆಗಿರೋ ಎಸ್ ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಗೆ (Resigns) ಕಾರಣ ಏನು ಅನ್ನೋದೇ ಕುತೂಹಲ ಮೂಡಿಸಿದೆ.

ಐಪಿಎಸ್ ಅಧಿಕಾರಿ ಎಸ್ ರವಿ ಅವರು ಡಿಜಿ ಕಚೇರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. 1998ರ ಬ್ಯಾಚ್​​ನ ಐಪಿಎಸ್ ಅಧಿಕಾರಿ ರವಿ , ಈ ಹಿಂದೆ ಗುಪ್ತಚರ ಇಲಾಖೆಯ ಎಡಿಜಿಪಿ ಆಗಿದ್ದರು. ಡಿಕೆ ಶಿವಕುಮಾರ್ ಅವರು ಸಿಎಂ ಆದ ಬಳಿಕ ಇವರನ್ನ KSRP ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿತ್ತು.

ರವಿ ಅವರಿಗೆ ನಿವೃತ್ತಿಗೆ ಆರು ತಿಂಗಳು ಬಾಕಿ ಇತ್ತು. ಇದೀಗ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಡಿಜಿ ಐಜಿಪಿ ಸಲೀಂ ಅವರು ಮಾಹಿತಿಯನ್ನು ದೃಢೀಕರಿಸಿದ್ದಾರೆ. ಕೆಲ ಮೂಲಗಳ ಪ್ರಕಾರ ಹಿರಿಯ ಅಧಿಕಾರ ಜೊತೆ ಮನಸ್ತಾಪದ ಕಾರಣ ರಾಜೀನಾಮೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.