ರಾಜ್ಯ

ವಯನಾಡ್‌ನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್‌ಗೆ ಲಾರಿ ಡಿಕ್ಕಿ, ಇಬ್ಬರು ಸಾವು, ನಾಲ್ವರು ವಿದ್ಯಾರ್ಥಿಗಳು ಗಂಭೀರ

ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿ ಮಂಡ್ಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದ ಪ್ರವಾಸಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಯನಾಡ್‌ನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್‌ಗೆ ಲಾರಿ ಡಿಕ್ಕಿ, ಇಬ್ಬರು ಸಾವು, ನಾಲ್ವರು ವಿದ್ಯಾರ್ಥಿಗಳು ಗಂಭೀರ
ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್‌ಗೆ ಲಾರಿ ಡಿಕ್ಕಿ — Online Desk
Published On :

ವಯನಾಡ್ (ಕೇರಳಂ): ಕೇರಳಂ ರಾಜ್ಯದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿ ಮಂಡ್ಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದ ಪ್ರವಾಸಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಸುಮಾರು 1:30 ರಿಂದ 1:45 ರ ಅವಧಿಯಲ್ಲಿ ಸುಲ್ತಾನ್ ಬತ್ತೇರಿಯ 54ನೇ ಮೈಲಿ ಬಳಿ ಈ ದುರ್ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಮಂಡ್ಯ ವಿಶ್ವವಿದ್ಯಾಲಯದ 13 ವಿದ್ಯಾರ್ಥಿಗಳು ಕೇರಳಂನ ಮುನ್ನಾರ್‌ಗೆ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ಸೋಮವಾರ ಮುಂಜಾನೆ ಸುಮಾರು 1:45 ಕ್ಕೆ ಸುಲ್ತಾನ್ ಬತ್ತೇರಿಯ 54ನೇ ಮೈಲಿ (ಕೊಲಗಪ್ಪರ) ಬಳಿ ಈ ಅಪಘಾತ ನಡೆದಿದೆ. ಇನ್ನು, ಅಪಘಾತದಲ್ಲಿ ಮೃತಪಟ್ಟವರನ್ನು ಮೈಸೂರು ಮೂಲದ ಟೆಂಪೋ ಟ್ರಾವೆಲರ್ ಚಾಲಕ 40 ವರ್ಷದ ರಂಜಿತ್ ಮತ್ತು ಅಡುಗೆಯವರಾದ 22 ವರ್ಷದ ಭರತ್ ಎಂದು ಗುರುತಿಸಲಾಗಿದೆ.

ಮುಂದುವರೆದು, ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ನಂತರ ವಿದ್ಯಾರ್ಥಿಗಳಿದ್ದ ವ್ಯಾನ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಡಿಕ್ಕಿಯ ರಭಸಕ್ಕೆ ವಾಹನದ ಬಾಗಿಲುಗಳು ಸಂಪೂರ್ಣವಾಗಿ ಜಖಂಗೊಂಡು ಲಾಕ್ ಆಗಿದ್ದರಿಂದ ವಿದ್ಯಾರ್ಥಿಗಳು ಒಳಗೆ ಸಿಲುಕಿಕೊಂಡಿದ್ದರು. ಇನ್ನು, ಸ್ಥಳೀಯ ನಿವಾಸಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ವಾಹನವನ್ನು ಕತ್ತರಿಸಿ ವಿದ್ಯಾರ್ಥಿಗಳನ್ನು ಹೊರತೆಗೆದಿದ್ದಾರೆ. ಏತನ್ಮಧ್ಯೆ,  ಗಾಯಗೊಂಡ ವಿದ್ಯಾರ್ಥಿಗಳನ್ನು ಮೊದಲು ಸುಲ್ತಾನ್ ಬತ್ತೇರಿಯ ಆಸ್ಪತ್ರೆಗೆ ಹಾಗೂ ನಂತರ ವಯನಾಡ್‌ನ ಮೇಪ್ಪಾಡಿಯಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.