ಸಿದ್ದರಾಮಯ್ಯನವರಿಗೆ ಸಂಬಂಧಪಟ್ಟ ವಿಡಿಯೊ ಬಗ್ಗೆ FIR ದಾಖಲಾಗಿದೆ, ಸಮಗ್ರ ತನಿಖೆ ನಡೆಸುತ್ತೇವೆ: ಪ್ರಿಯಾಂಕ್ ಖರ್ಗೆ; Video
ಪ್ರಜ್ವಲ್ ರೇವಣ್ಣ ಜೈಲಲ್ಲಿ ಇರೋದಿಕ್ಕೆ, ಅವರ ವಿಕೃತ ಮನಸ್ಥಿತಿಗೆ ಕಾಂಗ್ರೆಸ್ ಕಾರಣನಾ, ನಿಮ್ಮನೆ ಮಕ್ಕಳನ್ನು ಸರಿಯಾಗಿ ಬೆಳೆಸಲು ಆಗದಿದ್ದರೆ ಅದಕ್ಕೂ ಕಾಂಗ್ರೆಸ್ ಗೂ ಏನು ಸಂಬಂಧ, ನಾಚಿಕೆಯಾಗುವುದಿಲ್ಲವೇ ಹೇಳಲು ಎಂದು ಕೇಳಿದರು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧ ಅಪಪ್ರಚಾರ ಮಾಡುವ ರೀತಿಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಅದಕ್ಕೆ ನ್ಯಾಯಾಲಯ ಕೂಡ ತಡೆಯಾಜ್ಞೆ ತಂದಿರುವುದು ರಾಜ್ಯ ರಾಜಕೀಯದಲ್ಲಿ ಬಹು ಚರ್ಚಿತ ವಿಷಯವಾಗಿದೆ.
ಈ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಲಾಗಿದೆ. ನಾವು ಸಮಗ್ರವಾಗಿ ತನಿಖೆ ನಡೆಸುತ್ತೇವೆ. ವಿಡಿಯೊದಲ್ಲಿರುವ ವಿಷಯಗಳೆಲ್ಲ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಡಿಯೊವನ್ನು ಯಾರು ಚಿತ್ರೀಕರಿಸಿದ್ದಾರೆ, ಎಲ್ಲಿಗೆ ಅಪ್ಲೋಡ್ ಮಾಡಲಾಗಿದೆ ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತನಿಖೆ ನಡೆಸುತ್ತೇವೆ ಎಂದರು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರಿಗೆ ಈ ಸ್ಥಿತಿ ಬರಬಾರದಾಗಿತ್ತು. ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರು.
ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರು ಕೇಂದ್ರ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಅವರು ಈ ರೀತಿ ಕ್ಷುಲ್ಲಕವಾಗಿ ಮಾತನಾಡಬಾರದು, ರೇವಣ್ಣ ಅವರ ಕುಟುಂಬದ ಬಗ್ಗೆ ಕಾಂಗ್ರೆಸ್ ನ್ನು ಆಪಾದಿಸಿದರು, ಅವರು ಮಾಡಿದ್ದೇನು, ವಿಡಿಯೊ ಮಾಡಿದ್ದು ಕಾಂಗ್ರೆಸ್ ನವರಾ, ಪ್ರಜ್ವಲ್ ರೇವಣ್ಣ ಜೈಲಲ್ಲಿ ಇರೋದಿಕ್ಕೆ, ಅವರ ವಿಕೃತ ಮನಸ್ಥಿತಿಗೆ ಕಾಂಗ್ರೆಸ್ ಕಾರಣನಾ, ನಿಮ್ಮನೆ ಮಕ್ಕಳನ್ನು ಸರಿಯಾಗಿ ಬೆಳೆಸಲು ಆಗದಿದ್ದರೆ ಅದಕ್ಕೂ ಕಾಂಗ್ರೆಸ್ ಗೂ ಏನು ಸಂಬಂಧ, ನಾಚಿಕೆಯಾಗುವುದಿಲ್ಲವೇ ಹೇಳಲು ಎಂದು ಕೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



