ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್
ಸಿಜೆಪಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಬಂಧನ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳುನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ.

ನವದೆಹಲಿ: ಸಿಜೆಪಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಬಂಧನ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳುನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನೆ ನಡೆಸುವ ಸ್ಥಳವನ್ನು ಬದಲಾಯಿಸಬಹುದು, ಪ್ರತಿಭಟನೆಯನ್ನು ತಡೆಯಬಹುದು. ಆದರೆ, ದೇಶದ ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ದೇಶದ ಜನರು ತಮ್ಮ ಪ್ರಶ್ನೆಗಳನ್ನು ಕೇಳುವುದನ್ನು ಯಾವುದೇ ನಿರ್ಬಂಧಗಳಿಂದ ತಡೆಯಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್ ತಮ್ಮ X ಖಾತೆಯಲ್ಲಿ ಪ್ರಶ್ನಿಸಿದ್ದಾರೆ. ನೀವು ಪ್ರತಿಭಟನೆಯ ಸ್ಥಳವನ್ನು ಬದಲಾಯಿಸಬಹುದು. ಪ್ರತಿಭಟನೆಯನ್ನು ತಡೆಯಬಹುದು. ಆದರೆ, ಈ ದೇಶದ ಧ್ವನಿಯನ್ನು ತಡೆಯಲು ಸಾಧ್ಯವಿಲ್ಲ. ಇಡೀ ದೇಶವೇ ಜಂತರ್ ಮಂತರ್ ಆಗಲಿದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಜನರು ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಉಲ್ಲಂಘನೆ ಆರೋಪ ಸಂಬಂಧ CEC ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ, ಇಂಡಿಯಾ ಮೈತ್ರಿಕೂಟ ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



