ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ಶಾಲೆಯಲ್ಲೇ ಹಾರ್ಟ್ ಅಟ್ಯಾಕ್; 9ನೇ ತರಗತಿ ವಿದ್ಯಾರ್ಥಿ ಸಾವು
ಇಂದು ಬೆಳಗ್ಗೆ ನಗುನಗುತ್ತಾ ಶಾಲೆಗೆ ಹೋದ ಮಗ ಸಂಜೆಯ ವೇಳೆಗೆ ಶವವಾಗಿ ಮನೆಗೆ ಮರಳಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಇಂದು ಬೆಳಗ್ಗೆ ನಗುನಗುತ್ತಾ ಶಾಲೆಗೆ ಹೋದ ಮಗ ಸಂಜೆಯ ವೇಳೆಗೆ ಶವವಾಗಿ ಮನೆಗೆ ಮರಳಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವೀರಮಣಿ(14) ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ ಬಾಲಕನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ರವಾನಿಸಲಾಯಿತು. ದುರಾದೃಷ್ಟವಶಾತ್ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ವೀರಮಣಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ವೀರಮಣಿ ಸಾವಿಗೆ ತೀವ್ರ ಹೃದಯಾಘಾತವೇ ಕಾರಣ ಎಂದು ಮಿಮ್ಸ್ ವೈದ್ಯರು ದೃಢಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



