ರಾಜ್ಯ

ಲಂಚ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು, ₹40 ಸಾವಿರ ದಂಡ

ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್‌ ಅವರಿಂದ 5,000ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದರು.

ಲಂಚ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು, ₹40 ಸಾವಿರ ದಂಡ
ಕೋರ್ಟ್
Published On :

ಶಿವಮೊಗ್ಗ: ವಿಕಲ ಚೇತನ ತಂದೆಗೆ ಪಿಂಚಣಿ ಕೊಡಿಸಲು 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ 5,000 ರೂ. ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಭದ್ರಾವತಿ ತಾಲೂಕಿನ ಕಲ್ಲಿಹಾಳ್‌ ನಾಡಕಚೇರಿಯ ಉಪ ತಹಶೀಲ್ದಾರ್‌ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ನಿವಾಸಿ ಗಿರೀಶ್‌ ಎಂಬುವರು ತಮ್ಮ ತಂದೆಗೆ ವಿಕಲಚೇತನರ ಪಿಂಚಣಿ ಸೌಲಭ್ಯ ಪಡೆಯಲು ಕಲ್ಲಿಹಾಳ್‌ ನಾಡಕಚೇರಿಗೆ ತೆರಳಿದ್ದಾಗ, ಉಪ ತಹಶೀಲ್ದಾರ್‌ ಪುಷ್ಪಲತಾ ಅವರು 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಗಿರೀಶ್‌ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಅನ್ವಯ 2017 ರ ಸೆಪ್ಟೆಂಬರ್ 21 ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್‌ ಅವರಿಂದ 5,000ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದರು.

ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್ಸ್​​​ಪೆಕ್ಟರ್​ ಎಚ್.ಎಸ್.ತಿಪ್ಪೇಸ್ವಾಮಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದ್ದು, ಅಧಿಕಾರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರ್‌ ರಾಜ್‌ ಅವರು ವಾದ ಮಂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.