ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮುಂದುವರಿದ ಕಳ್ಳಬೇಟೆ: ಮೂವರ ಎನ್‌ಕೌಂಟರ್ ಪ್ರಕರಣ ಮಾಸುವ ಮುನ್ನವೇ, ಕಡವೆ ಕೊಂದು ಕಳ್ಳಬೇಟೆಗಾರರು ಪರಾರಿ
ಹನೂರು ಅರಣ್ಯದಲ್ಲಿ ಮತ್ತೊಂದು ಅಮಾನವೀಯ ಕಳ್ಳಬೇಟೆ: ಉಡುತೊರೆಹಳ್ಳ ಡ್ಯಾಂ ಬಳಿ, ನೀರು ಕುಡಿಯಲು ಬಂದ ಕಡವೆಯನ್ನು ನಾಡಬಂದೂಕಿನಿಂದ ಹೊಡೆದು ಮೂರು ತುಂಡು ಮಾಡಿದ ಬೇಟೆಗಾರರು ಪರಾರಿ; ಕಡವೆ ಮಾಂಸ ಜಪ್ತಿ, ಆರೋಪಿಗಳಿಗಾಗಿ ಅರಣ್ಯ ಸಿಬ್ಬಂದಿ ಶೋಧ.

ಹನೂರು (ಚಾಮರಾಜನಗರ): ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೋಕಿನ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ, ಇದೇ ಅರಣ್ಯ ವ್ಯಾಪ್ತಿಯಲ್ಲಿ ಮತ್ತೊಂದು ಅಮಾನವೀಯ ಕಳ್ಳಬೇಟೆ ಪ್ರಕರಣ ಬೆಳಕಿಗೆ ಬಂದಿದ್ದು, ನೀರು ಕುಡಿಯಲು ಬಂದಿದ್ದ ಕಡವೆಯನ್ನು ನಾಡಬಂದೂಕಿನಿಂದ ಶೂಟ್ ಮಾಡಿ, ಮೂರು ತುಂಡು ಮಾಡಿ ಸಾಗಿಸಲು ಯತ್ನಿಸುತ್ತಿದ್ದ ಘಟನೆ ವರದಿಯಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ:
ಏನಿದು ಘಟನೆ?
ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯದ ಉಡುತೊರೆಹಳ್ಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ನೀರು ಕುಡಿಯಲು ಬಂದಿದ್ದ ಕಡವೆಯನ್ನು ನಾಡಬಂದೂಕಿನಿಂದ ಶೂಟ್ ಮಾಡಿ, ಮೂರು ತುಂಡು ಮಾಡಿ ಸಾಗಿಸಲು ಯತ್ನಿಸುತ್ತಿದ್ದ ಘಟನೆ ನಡೆದಿದೆ. ಸೆಪ್ಟೆಂಬರ್ 1 ರಂದು ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ತಲೆಯ ಮೇಲೆ ಚೀಲ ಹೊತ್ತು ನಾಡಬಂದೂಕು ಹಿಡಿದು ಸಾಗುತ್ತಿದ್ದ ನಾಲ್ವರು ಶಂಕಿತರನ್ನು ಗುರುತಿಸಿದ್ದಾರೆ. ಇನ್ನು, ಅರಣ್ಯ ಸಿಬ್ಬಂದಿಯನ್ನು ನೋಡುತ್ತಿದ್ದಂತೆಯೇ ಬೇಟೆಗಾರರು ಕಡವೆ ಮಾಂಸವಿದ್ದ ಚೀಲ ಹಾಗೂ ನಾಡಬಂದೂಕುಗಳನ್ನು ಸ್ಥಳದಲ್ಲೇ ಬಿಟ್ಟು ದಟ್ಟ ಅರಣ್ಯದೊಳಗೆ ಓಡಿ ಹೋಗಿದ್ದಾರೆ. ಎತನ್ಮಧ್ಯೆ, ಸ್ಥಳ ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಮೂರು ತುಂಡುಗಳಾಗಿ ಕತ್ತರಿಸಲಾಗಿದ್ದ ಕಡವೆಯ ಮಾಂಸ ಪತ್ತೆಯಾಗಿದ್ದು, ಅದನ್ನು ಅರಣ್ಯ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.
ಮುಂದುವರೆದು, ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅದರಲ್ಲೂ, ಕಾಡುಪ್ರಾಣಿಗಳ ಬೇಟೆ ತಡೆಯಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದರೂ, ಬೇಟೆಗಾರರು ಮತ್ತೆ ಸಕ್ರಿಯರಾಗಿರುವುದು ಆತಂಕಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




