ಪಾರ್ಕ್ ಬಿಲ್‌ಗೆ ಸದ್ಯಕ್ಕೆ ಬ್ರೇಕ್; ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ: ಡಿಸಿಎಂ ಜಿ. ಪರಮೇಶ್ವರ; Video
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಸೂದೆಯನ್ನು ಸದ್ಯಕ್ಕೆ ವಾಪಸ್ ಪಡೆದು ಸಾರ್ವಜನಿಕ ಚರ್ಚೆಗೆ ಮುಕ್ತಗೊಳಿಸಲಾಗುವುದು.

ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ಮಸೂದೆ, 2026 ಅನ್ನು ವಾಪಸ್ ಪಡೆಯಲು ಸಚಿವ ಸಂಪುಟ ನಿರ್ಧರಿಸಿದೆಯಾದರೂ ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ ಮಾಡುವುದಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಸೂದೆಯನ್ನು ಸದ್ಯಕ್ಕೆ ವಾಪಸ್ ಪಡೆದು ಸಾರ್ವಜನಿಕ ಚರ್ಚೆಗೆ ಮುಕ್ತಗೊಳಿಸಲಾಗುವುದು. ಮಸೂದೆಯಲ್ಲಿರುವ ಅಂಶಗಳ ಬಗ್ಗೆ ಸ್ಪಷ್ಟನೆ ನೀಡಲು ಹಾಗೂ ಸಾರ್ವಜನಿಕರಿಂದ ವ್ಯಕ್ತವಾಗಿರುವ ಆತಂಕಗಳನ್ನು ಪರಿಹರಿಸಲು ಮುಂದಿನ ಅಧಿವೇಶನದವರೆಗಿನ ಅವಧಿಯನ್ನು ಸರ್ಕಾರ ಬಳಸಿಕೊಳ್ಳಲಿದೆ ಎಂದು ಹೇಳಿದರು.
“ಸದ್ಯಕ್ಕೆ ಮಸೂದೆಯನ್ನು ವಾಪಸ್ ಪಡೆಯಲು ನಿರ್ಧರಿಸಿದ್ದೇವೆ. ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆಗಾಗಿ ಇದನ್ನು ಸಾರ್ವಜನಿಕ ವಲಯಕ್ಕೆ ತರಲಾಗುವುದು. ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ಮತ್ತೆ ಮಂಡಿಸಲಾಗುವುದು” ಎಂದರು.
ಮಸೂದೆಯನ್ನು ಮತ್ತಷ್ಟು ಚರ್ಚೆಗೆ ಒಳಪಡಿಸಿ, ಅಗತ್ಯ ಸ್ಪಷ್ಟನೆ ಹಾಗೂ ಬದಲಾವಣೆಗಳ ಬಳಿಕ ಮುಂದಿನ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಪ್ರತಿಭಟನೆ ಹಿಂದೆ ಬಿಜೆಪಿ ರಾಜಕೀಯ
ಅಂತೆಯೇ ಮಸೂದೆ ವಿರುದ್ಧ ನಡೆದ ಪ್ರತಿಭಟನೆ ಹಾಗೂ ಅಭಿಯಾನಗಳ ಹಿಂದೆ ಬಿಜೆಪಿ ರಾಜಕೀಯ ಉದ್ದೇಶವಿದೆ ಎಂದು ಅವರು ಆರೋಪಿಸಿದರು.
“ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ಈ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಮಸೂದೆ ಕುರಿತು ವಿವರವಾದ ಚರ್ಚೆಯನ್ನೂ ನಡೆಸಲಿಲ್ಲ. ಬದಲಾಗಿ, ರಾಜಕೀಯ ಉದ್ದೇಶಕ್ಕಾಗಿ ಈ ವಿಚಾರವನ್ನು ಬಳಸಿಕೊಂಡು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಯಿತು” ಎಂದು ಪರಮೇಶ್ವರ್ ಹೇಳಿದರು.
ಸರ್ಕಾರ ಮಸೂದೆಯನ್ನು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಉದ್ಯಾನವನಗಳ ಜಾಗವನ್ನು ಸಾರ್ವಜನಿಕ ಯೋಜನೆಗಳಿಗಾಗಿ ಬಳಸುವ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾರ್ವಜನಿಕ ಚರ್ಚೆ ನಡೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



