ರಾಜ್ಯ

ಕಲಬುರಗಿ ಬಳಿ ಭೀಕರ ಅಪಘಾತ: ಆಟೋ-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ; ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು!

ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ವಾಡಿ ಪಟ್ಟಣದ ಶರಣಮ್ಮ ಸಿಂಘೆ (30) ಆಕೆಯ ಮೂರು ತಿಂಗಳ ಮಗ ರಾಘವೇಂದ್ರ ಸಿಂಘೆ ಎಂದು ಗುರುತಿಸಲಾಗಿದೆ.

ಕಲಬುರಗಿ ಬಳಿ ಭೀಕರ ಅಪಘಾತ: ಆಟೋ-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ; ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು!
ಡಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾದ ಆಟೋ
Published On :

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋ – ಲಾರಿ ಮಧ್ಯೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಮೂರು ತಿಂಗಳ ಮಗು ಹಾಗೂ ತಾಯಿ ಮೃತಪಟ್ಟಿದ್ದಾರೆ.

ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ವಾಡಿ ಪಟ್ಟಣದ ಶರಣಮ್ಮ ಸಿಂಘೆ (30) ಆಕೆಯ ಮೂರು ತಿಂಗಳ ಮಗ ರಾಘವೇಂದ್ರ ಸಿಂಘೆ ಎಂದು ಗುರುತಿಸಲಾಗಿದೆ.

ಅತ್ತೆ ಸಾಬಮ್ಮ, ಆಟೋ ಚಾಲಕ ಖಾಜಾ ಪಟೇಲ್‌ಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೂರು ತಿಂಗಳ ಹಿಂದೆ ಸಿಜೇರಿಯನ್ ಮಾಡಿಸಿಕೊಂಡಿದ್ದ ಶರಣಮ್ಮ, ಹೊಲಿಗೆ ಬಿಚ್ಚಿಸಿಕೊಂಡು ಬರಲು ಮಗು ಮತ್ತು ಅತ್ತೆಯೊಂದಿಗೆ ಯಾದಗಿರಿ ಆಸ್ಪತ್ರೆಗೆ ತೆರಳಿದ್ದರು. ಆಟೋದಲ್ಲಿ ವಾಪಸ್ ಬರುವಾಗ ಹಲಕರ್ಟಿ ಸಮೀಪ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.