ರಾಜ್ಯ

ವಿದ್ಯುತ್ ಬೇಡಿಕೆ ನೀಗಿಸಲು ಸರ್ಕಾರದ ಮಹತ್ವದ ಯೋಜನೆ; 2030ರ ವೇಳೆಗೆ 66 ಗಿಗಾವ್ಯಾಟ್‌ ಗುರಿ; 3 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ..!

ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆಯಿಂದ ಖಾಸಗಿ ವಲಯದಿಂದ ಸುಮಾರು ರೂ.3 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆ ಶುದ್ಧ ಇಂಧನ ಉತ್ಪಾದನೆಗೆ.

ವಿದ್ಯುತ್ ಬೇಡಿಕೆ ನೀಗಿಸಲು ಸರ್ಕಾರದ ಮಹತ್ವದ ಯೋಜನೆ; 2030ರ ವೇಳೆಗೆ 66 ಗಿಗಾವ್ಯಾಟ್‌ ಗುರಿ; 3 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ..!
ವಿದ್ಯುತ್ ಪೂರೈಕೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯ ಸರ್ಕಾರವು 2030ರ ವೇಳೆಗೆ ರಾಜ್ಯದ ಸ್ಥಾಪಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಪ್ರಸ್ತುತ 39 ಗಿಗಾವ್ಯಾಟ್‌ನಿಂದ 66 ಗಿಗಾವ್ಯಾಟ್‌ಗೆ ಹೆಚ್ಚಿಸುವ 10 ವರ್ಷಗಳ ಮಾರ್ಗಸೂಚಿಯನ್ನು ಗುರುವಾರ ಪ್ರಕಟಿಸಿದೆ.

ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಎಲೆಕ್ಟ್ರಿಸಿಟಿ ಇಂಡಿಯನ್ ಯುಟಿಲಿಟಿ ವೀಕ್ 2026 ಶೃಂಗಸಭೆಯ ‘ಕರ್ನಾಟಕ ಕೇಂದ್ರೀಕೃತ ರಾಜ್ಯ ಅಧಿವೇಶನ’ದಲ್ಲಿ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಈ ಮಾಹಿತಿ ನೀಡಿದರು.

ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆಯಿಂದ ಖಾಸಗಿ ವಲಯದಿಂದ ಸುಮಾರು ರೂ.3 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆ ಶುದ್ಧ ಇಂಧನ ಉತ್ಪಾದನೆಗೆ ಎಂದು ಸ್ಪಷ್ಟಪಡಿಸಿದರು.

ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ವಿದ್ಯುತ್ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಕೆಲಸ ನಡೆಯುತ್ತಿದೆ. ಇದರಲ್ಲಿ ವಿದ್ಯುತ್ ಜಾಲದ ಮೂಲಸೌಕರ್ಯ ಬಲಪಡಿಸುವುದು, ಇಂಧನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಕರ್ನಾಟಕದಲ್ಲಿ 39 ಗಿಗಾವ್ಯಾಟ್‌ಗಿಂತ ಹೆಚ್ಚು ಸ್ಥಾಪಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿದೆ. ರಾಜ್ಯದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಸುಮಾರು ಮೂರನೇ ಎರಡರಷ್ಟು ಪಾಲು ಜಲವಿದ್ಯುತ್ ಮತ್ತು ಇತರ ನವೀಕರಿಸಬಹುದಾದ ಶುದ್ಧ ಇಂಧನ ಮೂಲಗಳಿಂದ ಬರುತ್ತಿದೆ ಎಂದು ಹೇಳಿದರು.

ಮುಂದಿನ ದಶಕದಲ್ಲಿ ಕರ್ನಾಟಕ ತನ್ನ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸಲಿದೆ. ಈ ಬೆಳವಣಿಗೆಯು ಬಹುತೇಕ ಹಸಿರು ಇಂಧನ ಆಧಾರಿತವಾಗಿರುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.