ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ; ಏರ್ ಶೋ ನಡೆಸಲು ಚಿಂತನೆ
ಏರ್ ಶೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಅವರು ಮನವಿ ಮಾಡಿದರು.

ಬೆಂಗಳೂರು: ಈ ಬಾರಿಯ ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜೊತೆಗೆ ವಿವಿಧ ದೇಶಗಳ ರಾಯಭಾರಿಗಳು, ಅಧಿಕಾರಿಗಳನ್ನು ಆಹ್ವಾನಿಸಲು ಸೂಚನೆ ನೀಡಲಾಯಿತು.
ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ 2026ರ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ಗುರುವಾರ ರೇಸ್ ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ನಡೆಯಿತು.
ರಾಜ್ಯಗಳ ಕಲಾ ತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧರಿಸಲಾಗಿದ್ದು, ಏರ್ ಶೋ ನಡೆಸುವ ಬಗ್ಗೆ ಕೇಂದ್ರ ರಕ್ಷಣಾ ಸಚಿವರ ಜೊತೆ ಸಿಎಂ ಚರ್ಚಿಸಿದರು. ಏರ್ ಶೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಅವರು ಮನವಿ ಮಾಡಿದರು. ದಸರಾದಲ್ಲಿ ಟಿಕೆಟ್ ಪಡೆದವರಿಗೆ ಸೂಕ್ತ ಆಸನ ವ್ಯವಸ್ಥೆಗೆ ಆದ್ಯತೆ ನೀಡಲು ಸಿಎಂ ಸೂಚನೆ ನೀಡಿದರು.
ಚಿತ್ರಸಂತೆ, ಫ್ಲೀ ಮಾರ್ಕೆಟ್, ವಿಂಟೇಜ್ ಕಾರ್ ರ‍್ಯಾಲಿ, ರಂಗೋಲಿ ಸ್ಪರ್ಧೆ ಮತ್ತಿತರ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ, ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ಪ್ರತಿ ದಿನ ಒಬ್ಬ ಸಚಿವರನ್ನು ನಿಯೋಜಿಸಲು ಸಿಎಂ ಡಿಕೆಶಿ ನಿರ್ದೇಶಿಸಿದರು.
ದಸರಾ ವೇಳೆ ಡ್ರೋನ್ ಶೋ ಆಯೋಜಿಸಲು ಉದ್ದೇಶಿಸಲಾಗಿದೆ. ದಸರಾ ಜಂಬೂಸವಾರಿಯ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಭಾಗವಹಿಸಲು ಭಾರತೀಯ ಸೇನಾಪಡೆಗಳು, ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಇಸ್ರೋ, ಡಿಆರ್ಡಿಓ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳಿಗೆ ಆಹ್ವಾನ ನೀಡಲು ತೀರ್ಮಾನಿಸಲಾಗಿದೆ.
ರಾಜ್ಯದ ಎಲ್ಲ ಭಾಗಗಳನ್ನು ಪ್ರತಿನಿಧಿಸುವ ಕಲಾ ತಂಡಗಳಿಗೆ ಅವಕಾಶ ನೀಡಬೇಕು. ಮೈಸೂರಿನ ಅರಮನೆ ಮತ್ತಿತರ ಪ್ರಮುಖ ತಾಣಗಳ ಕುರಿತು ಕಿರುಚಿತ್ರ ನಿರ್ಮಿಸಿ, ವ್ಯಾಪಕ ಪ್ರಚಾರ ನೀಡಲು ಸಿಎಂ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



