ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಿದ CM ಶಿವಕುಮಾರ್!
ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕೂಡ್ಲಿಗಿ (ವಿಜಯನಗರ): ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ, ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಶೇಕಡಾ 7.5 ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದ ಬಡ ಹಾಗೂ ಸಾಮಾನ್ಯ ಕುಟುಂಬಗಳ ಮಕ್ಕಳಿಗೆ ಉನ್ನತ ವ್ಯಾಸಂಗ ಮತ್ತು ಅವಕಾಶಗಳಲ್ಲಿ ನೆರವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಕುರಿತ ಸಂಪೂರ್ಣ ನಿಯಮಾವಳಿ ಮತ್ತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಏತನ್ಮಧ್ಯೆ, ಗ್ರಾಮೀಣ ಪ್ರದೇಶದಲ್ಲಿ 1 ರಿಂದ 10 ನೇ ತರಗತಿವರೆಗೆ ಓದಿದ ವಿದ್ಯಾರ್ಥಿಗಳಿಗೆ ಪ್ರಸ್ತುತ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಎಲ್ಲಾ ಗ್ರೂಪ್ ಹುದ್ದೆಗಳಲ್ಲಿ 25% ಮೀಸಲಾತಿ ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 15% ಮೀಸಲಾತಿ ನಿಗದಿಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



