ಬೆಂಗಳೂರು ಸುರಂಗ ರಸ್ತೆ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಳ..! ಇಷ್ಟು ಹಣ ಬೇಕೇ..?
ಪ್ರಸ್ತಾವಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತವನ್ನು ಶೇ.97ರಷ್ಟು ಹೆಚ್ಚಿಸಲಾಗಿದೆ, ಬೆಂಗಳೂರಿಗೆ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಾರಣವೇನು..?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ಸುರಂಗ ರಸ್ತೆಗೆ ಇಷ್ಟು ಹಣ ಬೇಕೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತಾವಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತವನ್ನು ಶೇ.97ರಷ್ಟು ಹೆಚ್ಚಿಸಲಾಗಿದೆ, ಬೆಂಗಳೂರಿಗೆ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಾರಣವೇನು ಎಂಬುದರ ಕುರಿತು ಸರ್ಕಾರ ಸಮಗ್ರ ಅಧ್ಯಯನ ನಡೆಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಇನ್ನೂ ಒಂದು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿರಲಿದೆ. ಈ ಅವಧಿಯಲ್ಲಿ ಸರ್ಕಾರ ಬೆಂಗಳೂರನ್ನು ಹಾಳು ಮಾಡಬಾರದು.
ಮೂಲಸೌಕರ್ಯ ಕಾಮಗಾರಿಗಳಿಗೆ ಉದ್ಯಾನವನದ ಜಮೀನು ಬಳಸುವ ಮಸೂದೆಯನ್ನು ರಾಜ್ಯ ಸರ್ಕಾರ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂಪಡೆದುಕೊಂಡಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



