ರಾಜ್ಯ

Upper Bhadra Project: ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕ ನೀರು ಹರಿವು, Video

ಬರಪೀಡಿತ ಪ್ರದೇಶಗಳ ನೀರಾವರಿ ಮತ್ತು ಜಲ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಮೇಲ್ಭದ್ರಾ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.

Upper Bhadra Project: ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕ ನೀರು ಹರಿವು, Video
ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಮೇಲ್ದಂಡೆ ನೀರು
Published On :

ಚಿತ್ರದುರ್ಗ: ಬರಪೀಡಿತ ಚಿತ್ರದುರ್ಗ ಜಿಲ್ಲೆಯ ನೀರಾವರಿ ವ್ಯವಸ್ಥೆಗೆ ಹೊಸ ಭರವಸೆ ಮೂಡಿದ್ದು, ಭದ್ರಾ ಮೇಲ್ದಂಡೆ ಯೋಜನೆಯ ಜಿಲ್ಲಾ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.

ಈ ಮೂಲಕ ಜಿಲ್ಲೆಯ ನೀರಾವರಿ ಹಾಗೂ ಜಲ ಭದ್ರತೆ ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಇಂದು ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಿಂದ ಪ್ರಾಯೋಗಿಕವಾಗಿ 3 ಟಿಎಂಸಿ ನೀರು ಹರಿಸಿ ಈ ಪ್ರಾಯೋಗಿಕ ಚಾಲನೆ ನಡೆಸಲಾಯಿತು.

ಕರ್ನಾಟಕ ಸಚಿವ ಟಿ. ರಘುಮೂರ್ತಿ, ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾಲುವೆಗೆ ನೀರು ಹರಿಸಿದರು. ಬರಪೀಡಿತ ಪ್ರದೇಶಗಳ ನೀರಾವರಿ ಮತ್ತು ಜಲ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಮೇಲ್ಭದ್ರಾ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿರುವ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸುವ ಕಾರ್ಯದಲ್ಲಿ ಚಿತ್ರದುರ್ಗ ಶಾಖಾ ಕಾಲುವೆಯ ಈ ಪ್ರಾಯೋಗಿಕ ನೀರು ಹರಿಸುವಿಕೆ ಸಾಕಷ್ಟು ಮಹತ್ವ ಪಡೆದಿದೆ.

ಕಾಲುವೆಯಲ್ಲಿ ನೀರು ಹರಿಸಿ ಅದರ ಕಾರ್ಯಕ್ಷಮತೆ ಹಾಗೂ ನೀರು ಸಾಗಣೆ ವ್ಯವಸ್ಥೆಯನ್ನು ಪರಿಶೀಲಿಸುವ ಪ್ರಕ್ರಿಯೆ ಆರಂಭವಾಗಿದೆ. ಯೋಜನೆ ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಂಡ ಬಳಿಕ ಚಿತ್ರದುರ್ಗ ಜಿಲ್ಲೆಯ ಹಲವು ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಸುಧಾರಿಸುವ ನಿರೀಕ್ಷೆಯಿದೆ.

ಇದರಿಂದ ಮಳೆಯನ್ನೇ ಅವಲಂಬಿಸಿರುವ ರೈತರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಕೃಷಿ ಉತ್ಪಾದಕತೆ ಹೆಚ್ಚಿಸಲು ನೆರವಾಗಲಿದೆ. ಅಲ್ಲದೆ, ನೀರಾವರಿ ಸೌಲಭ್ಯ ವಿಸ್ತರಣೆಯಿಂದ ಕೃಷಿ ಆಧಾರಿತ ಚಟುವಟಿಕೆಗಳಿಗೆ ಉತ್ತೇಜನ ದೊರೆಯುವ ಜೊತೆಗೆ, ಗ್ರಾಮೀಣ ಆರ್ಥಿಕತೆ ಮತ್ತು ಈ ಭಾಗದ ಒಟ್ಟಾರೆ ಅಭಿವೃದ್ಧಿಗೂ ಯೋಜನೆ ಕೊಡುಗೆ ನೀಡುವ ನಿರೀಕ್ಷೆಯಿದೆ.

ಬರದ ನಾಡು ಎಂಬ ಹಣೆಪಟ್ಟಿ ಹೊಂದಿರುವ ಚಿತ್ರದುರ್ಗಕ್ಕೆ ನೀರಿನ ಶಾಶ್ವತ ಪರಿಹಾರದ ನಿರೀಕ್ಷೆ ಮೂಡಿಸಿರುವ ಮೇಲ್ಭದ್ರಾ ಯೋಜನೆಯ ಪ್ರಗತಿಯತ್ತ ಶಾಖಾ ಕಾಲುವೆಯ ಟ್ರಯಲ್ ರನ್ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.

ಸ್ಥಳೀಯರಲ್ಲಿ ಭರವಸೆ

ಈ ಮೂಲಕ ಚಿತ್ರದುರ್ಗ ಜಿಲ್ಲೆಯ ರೈತರಿಗೆ ನೀರಾವರಿ ಸೌಲಭ್ಯ ವಿಸ್ತರಣೆಯಾಗುವ ನಿರೀಕ್ಷೆ ಮೂಡಿದೆ. ಕಾಲುವೆ ಮೂಲಕ ನೀರು ಲಭ್ಯವಾದರೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದ್ದು, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ದೊಡ್ಡ ಮಟ್ಟದ ನೆರವಾಗಲಿದೆ.

ಯೋಜನೆಯ ಪ್ರಗತಿಯಿಂದ ಚಿತ್ರದುರ್ಗ ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿ ನೀರಿನ ಲಭ್ಯತೆ ಹೆಚ್ಚಿಸುವ ಜೊತೆಗೆ ಕೃಷಿ ಉತ್ಪಾದಕತೆ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.