ಬಿ. ನಾಗೇಂದ್ರಗೆ ಬಿಗ್ ಶಾಕ್: ಮಾಜಿ ಸಚಿವರನ್ನು ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದ ED; ಮರು ವಿಚಾರಣೆ ಯಾಕೆ?
ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್ನಲ್ಲಿರೋ ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ. ಇಡಿ ಸೋಮವಾರ ಬಿ ನಾಗೇಂದ್ರ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ.
ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್ನಲ್ಲಿರೋ ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗಾಗಿ ಹಾಜರಾಗಿದ್ದಾರೆ.
ಮರು ವಿಚಾರಣೆ ಯಾಕೆ?
ಚಾರ್ಜ್‌ಶೀಟ್ ಬಳಿಕ ಮತ್ತಷ್ಟು ಮಾಹಿತಿ ಪಡೆಯಲು ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರಗೆ ಅವರಿ ಇಡಿ ಸಮನ್ಸ್ ನೀಡಿತ್ತು ಎನ್ನಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನಾಗೇಂದ್ರ ಅವರು ಈಗಾಗಲೇ ಮೂರು ತಿಂಗಳು ಜೈಲುವಾಸ ಅನುಭವಿಸಿದ್ದು, ಬಳಿಕ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದರು.
ಪ್ರಕರಣ ಸಂಬಂದ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಸಿಬಿಐ ಸಹ ಚಾರ್ಜ್‌ಶೀಟ್ ಸಲ್ಲಿಸಿದೆ. ಅಲ್ಲದೆ ಜಾರಿ ನಿರ್ದೇಶನಾಲಯ(ED) ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



