ರಾಜ್ಯ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು; ರೌಡಿಶೀಟರ್‌ ಹತ್ಯೆ ಆರೋಪಿ cಪೊಲೀಸರ ಗುಂಡೇಟು..!

ಈ ವೇಳೆ ತುಂಗಾನಗರ ಠಾಣೆಯ ಇನ್‌ಸ್ಪೆಕ್ಟರ್‌ ಗುರುರಾಜ್‌ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು; ರೌಡಿಶೀಟರ್‌ ಹತ್ಯೆ ಆರೋಪಿ cಪೊಲೀಸರ ಗುಂಡೇಟು..!
ದರೋಡೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು (ಸಾಂದರ್ಭಿಕ ಚಿತ್ರ) — PTI
Published On :

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗ–ಎನ್.ಆರ್.ಪುರ ರಸ್ತೆಯ ಲಿಂಗಾಪುರ ಬಳಿ ಸೋಮವಾರ ನಡೆದಿದೆ.

ಹತ್ಯೆ ಪ್ರಕರಣದ ಆರೋಪಿ ಉಮೇಶ್‌ ನಾಯ್ಕ್‌ (27) ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರು ಲಿಂಗಾಪುರಕ್ಕೆ ತೆರಳಿದ್ದ ವೇಳೆ, ಪೊಲೀಸ್‌ ಸಿಬ್ಬಂದಿ ತಮ್ಮಣ್ಣ ಜಂಬಗಿ ಮೇಲೆ ಆತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಈ ವೇಳೆ ತುಂಗಾನಗರ ಠಾಣೆಯ ಇನ್‌ಸ್ಪೆಕ್ಟರ್‌ ಗುರುರಾಜ್‌ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಉಮೇಶ್‌ ನಾಯ್ಕ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್‌ ಸಿಬ್ಬಂದಿ ತಮ್ಮಣ್ಣ ಜಂಬಗಿಗೂ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇನ್ನು ರಾಮಿನಕೊಪ್ಪದಲ್ಲಿ ಭಾನುವಾರ ಸಂಜೆ ರೌಡಿಶೀಟರ್‌ ಕಿರಣ್‌ ಅಲಿಯಾಸ್‌ ಕುಳ್ಳಿ ಕಿರಣ್‌ನನ್ನು 3-4 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಈ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಇದೀಗ ಪ್ರಮುಖ ಆರೋಪಿಯೊಬ್ಬನನ್ನು ಗುಂಡು ಹಾರಿಸಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.