ರಾಜ್ಯ

ಪರಪ್ಪನ ಅಗ್ರಹಾರ ನಂತರ ಮಂಗಳೂರು ಜೈಲಿನ ಮೇಲೆ ಪೊಲೀಸ್ ದಾಳಿ; 9 ಕೈದಿಗಳಿಂದ 10 ಮೊಬೈಲ್ ವಶ!

ಒಂಬತ್ತು ವಿಚಾರಣಾಧೀನ ಕೈದಿಗಳನ್ನು ಇರಿಸಲಾಗಿದ್ದ ಎ-ಬ್ಲಾಕ್‌ನಿಂದ ಹತ್ತು ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ನಂತರ ಮಂಗಳೂರು ಜೈಲಿನ ಮೇಲೆ ಪೊಲೀಸ್ ದಾಳಿ; 9 ಕೈದಿಗಳಿಂದ 10 ಮೊಬೈಲ್ ವಶ!
ಮಂಗಳೂರು ಜೈಲು
Published On :

ಮಂಗಳೂರು: ಇತ್ತೀಚಿನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ ಕೈದಿಗಳಿಂದ ಮೊಬೈಲ್ ವಶಪಡಿಸಿಕೊಂಡ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೂ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಒಂಬತ್ತು ವಿಚಾರಣಾಧೀನ ಕೈದಿಗಳನ್ನು ಇರಿಸಲಾಗಿದ್ದ ಎ-ಬ್ಲಾಕ್‌ನಿಂದ ಹತ್ತು ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ವಿಚಾರಣಾಧೀನ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಸುತ್ತಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಆಧರಿಸಿ ಈ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಭಾರತೀಯ ನ್ಯಾಯ ಸಂಹಿತೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ಕೈದಿಗಳಾದ ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಾಕ್ ಅಲಿಯಾಸ್ ಜುಟ್ಟು ಅಸ್ಫಾಕ್, ಅರ್ಷದ್, ದಾವೂದ್ ಪರ್ವೇಜ್, ನಜ್ರತ್ ಅಲಿ, ಶಿಫಾನ್, ಅಬ್ದುಲ್ ಸಾದಿಕ್ ಮತ್ತು ಅರ್ಫಜ್ ಅಕ್ರಮವಾಗಿ ಜೈಲಿನಲ್ಲಿ ಮೊಬೈಲ್ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೈದಿಗಳ ಪೈಕಿ ರಿಫತ್ ಅಲಿ, ಇಬ್ರಾಹೀಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಶ್ಫಾಕ್, ಅರ್ಷದ್ ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. ದಾವೂದ್ ಫರ್ವೇಝ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದಿಕ್ ಡ್ರಗ್ಸ್ ಪೆಡ್ಲರ್ ಆರೋಪಿಗಳಾಗಿದ್ದರೆ, ಅರ್ಫಾಝ್ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರ್ಕೆ ಪೊಲೀಸರು ವಶಪಡಿಸಿಕೊಂಡ ಫೋನ್‌ಗಳ ಬಳಕೆ ಮತ್ತು ಪೂರೈಕೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.