ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕ್ಲೀನ್‌ಚಿಟ್ ಬೆನ್ನಲ್ಲೇ ದಯಾನಂದ್‌ಗೆ DGP ಹುದ್ದೆ..!

2025ರ ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯಿಂದ ದಯಾನಂದ್ ಅವರನ್ನು ದೋಷಮುಕ್ತಗೊಳಿಸಿದ ಕೆಲವೇ ದಿನಗಳ ಬಳಿಕ ಈ ಬಡ್ತಿ ದೊರೆತಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕ್ಲೀನ್‌ಚಿಟ್ ಬೆನ್ನಲ್ಲೇ ದಯಾನಂದ್‌ಗೆ DGP ಹುದ್ದೆ..!
ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್
Published On :

ಬೆಂಗಳೂರು: 1994ನೇ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರನ್ನು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಗೆ ಬಡ್ತಿ ನೀಡಿ, ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಮುಖ್ಯಸ್ಥರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ.

ಈ ಹಿಂದೆ ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ್ ಅವರಿಗೆ 2025ರ ಸೆಪ್ಟೆಂಬರ್ 12ರಿಂದ ಅನ್ವಯವಾಗುವಂತೆ ಹಿಂಬಾಕಿ ಪರಿಣಾಮದೊಂದಿಗೆ ಹಂತ-16ರಲ್ಲಿ ಡಿಜಿಪಿ ಹುದ್ದೆಯ ಬಡ್ತಿ ನೀಡಲಾಗಿದೆ. ಅವರ ಹೊಸ ಹುದ್ದೆ ತಕ್ಷಣದಿಂದಲೇ ಜಾರಿಗೆ ಬರಲಿದೆ.

ಇದರ ಜೊತೆಗೆ, ಐಪಿಎಸ್ (ವೇತನ) ನಿಯಮಗಳು, 2016ರ ಅನ್ವಯ ಡಿಜಿಪಿ, ಐಎಸ್‌ಡಿ ಹುದ್ದೆಯನ್ನು ಡಿಜಿಪಿ-ಸಿಐಡಿ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಗಳಿರುವ ಹುದ್ದೆ ಎಂದು ಸರ್ಕಾರ ಘೋಷಿಸಿದೆ.

2025ರ ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯಿಂದ ದಯಾನಂದ್ ಅವರನ್ನು ದೋಷಮುಕ್ತಗೊಳಿಸಿದ ಕೆಲವೇ ದಿನಗಳ ಬಳಿಕ ಈ ಬಡ್ತಿ ದೊರೆತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದ ಸಮಯದಲ್ಲಿ ದಯಾನಂದ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು.

ಘಟನೆಯ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು. ಇತರ ಅಧಿಕಾರಿಗಳೊಂದಿಗೆ ಅವರ ವಿರುದ್ಧವೂ ಇಲಾಖಾ ವಿಚಾರಣೆ ನಡೆಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.