ಬಳ್ಳಾರಿ ತಲುಪಿದ ಬಿಜೆಪಿ ಪಾದಯಾತ್ರೆ: ಯುವಶಕ್ತಿಯೇ ದೇಶದ ಭವಿಷ್ಯ- ಬಿ.ವೈ ವಿಜಯೇಂದ್ರ
ಗುಣಮಟ್ಟದ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಿದರೆ ಭಾರತದ ಯುವಕರು ದೇಶದ ಅತಿದೊಡ್ಡ ಆಸ್ತಿಯಾಗುತ್ತಾರೆ ಎಂದು ಹೇಳಿದರು

ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರೂ ದುರ್ಬಳಕೆ ಆದ 187 ಕೋಟಿ ರು. ವಾಪಸ್ ಆ ನಿಗಮಕ್ಕೆ ಜಮಾ ಆಗಬೇಕು ಎಂಬ ಆಗ್ರಹ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಸೋಮವಾರ ಗಣಿ ನಾಡು, ಬಳ್ಳಾರಿಯಲ್ಲಿ ತಲುಪಿದೆ.
ಗುಣಮಟ್ಟದ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಿದರೆ ಭಾರತದ ಯುವಕರು ದೇಶದ ಅತಿದೊಡ್ಡ ಆಸ್ತಿಯಾಗುತ್ತಾರೆ ಎಂದು ಹೇಳಿದರು, ಆದರೆ ಜನಸಂಖ್ಯಾ ಲಾಭಾಂಶವನ್ನು ಬಳಸಿಕೊಳ್ಳುವಲ್ಲಿ ವಿಫಲವಾದರೆ ಅದು ಸಾಮಾಜಿಕ ಸವಾಲಾಗಿ ಪರಿಣಮಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದರು.
ಬಳ್ಳಾರಿ ಚಲೋ ಪಾದಯಾತ್ರೆ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸಿದ ನಂತರ ಕಂಪ್ಲಿಯಲ್ಲಿ ಯುವಕರೊಂದಿಗೆ ಉದ್ಯೋಗ, ಶಿಕ್ಷಣ, ಕೆಪಿಎಸ್ಸಿ ಸುಧಾರಣೆಗಳು, ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ನಡೆದ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.
ಭಾರತದ ಜನಸಂಖ್ಯೆಯ ಸುಮಾರು ಶೇ. 65 ರಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ಯುವಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ವಿಜಯೇಂದ್ರ ಹೇಳಿದರು. ಕೆಪಿಎಸ್ಸಿಯಲ್ಲಿ ಪ್ರಮುಖ ಬದಲಾವಣೆಗೆ ಕರೆ ನೀಡಿದ ವಿಜಯೇಂದ್ರ, ಅಧಿಸೂಚನೆಗಳು, ಪರೀಕ್ಷೆಗಳು, ಫಲಿತಾಂಶಗಳು ಮತ್ತು ಸಂದರ್ಶನಗಳಲ್ಲಿ ದೀರ್ಘಕಾಲದ ವಿಳಂಬವು ಲಕ್ಷಾಂತರ ಆಕಾಂಕ್ಷಿಗಳಲ್ಲಿ ನಿರಾಶೆಯನ್ನು ಉಂಟುಮಾಡಿದೆ ಎಂದು ಹೇಳಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲೇ ಕಾಲ ಕಳೆದಿದೆ. ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿದ ನಾಗೇಂದ್ರ ಅವರನ್ನು ಎರಡು ಬಾರಿ ರಾಜೀನಾಮೆ ಕೊಡಿಸಿದ್ದೇವೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಇಂತಹ ಜನವಿರೋಧಿ, ರೈತ ವಿರೋಧಿ, ದಲಿತ ವಿರೋಧಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಎಂದು ಕರೆ ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಬಿಟ್ಟಿರುವುದು, ನಿರುದ್ಯೋಗ, ಪರೀಕ್ಷಾ ಅಕ್ರಮಗಳಂತಹ ಪ್ರಮಾದಗಳಿಂದ ನಮ್ಮ ಯುವಪೀಳಿಗೆ ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಯುವಶಕ್ತಿಯ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಡುವುದು ನಮ್ಮ ದಾಯಿತ್ವವೂ ಹೌದು, ನಮ್ಮ ಕರ್ತವ್ಯವೂ ಕೂಡ ಆಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




