ಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!
ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬುಧವಾರ ಕಬ್ಬಿಣದ ಆಂಗಲ್ ಗಳು ತುಂಬಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಕಬ್ಬಿಣದ ಆಂಗಲ್ ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಕೆಎಸ್ಆರ್ ಟಿಸಿ ಬಸ್ ಓವರ್ ಟೆಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



