ರಾಜ್ಯ

ಸಿಎಂ ಡಿ.ಕೆ ಶಿವಕುಮಾರ್ ತಾಯಿಗೆ ನೋಟಿಸ್ ಜಾರಿ ಮಾಡಿಲ್ಲ: ಚುನಾವಣಾಧಿಕಾರಿ ಸ್ಪಷ್ಟನೆ!

ಈ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕಾರ್ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಡಿ.ಕೆ ಶಿವಕುಮಾರ್ ತಾಯಿಗೆ ನೋಟಿಸ್ ಜಾರಿ ಮಾಡಿಲ್ಲ: ಚುನಾವಣಾಧಿಕಾರಿ ಸ್ಪಷ್ಟನೆ!
ಸಿಎಂ ಡಿಕೆ ಶಿವಕುಮಾರ್ ತಾಯಿ ಗೌರಮ್ಮ
Published On :

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿಗೆ ಎಸ್ ಐಆರ್ ಪ್ರಕ್ರಿಯೆಯಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ ಎಂದು ವರದಿಯಾಗಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು.

ಆದರೆ, ಈ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕಾರ್ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಹೆಸರಿನ ಸಾಮ್ಯತೆಯಿಂದ ಗೊಂದಲ ಉಂಟಾಗಿರುವುದಾಗಿ ತಿಳಿಸಿದ್ದಾರೆ.

Story image

ಕನಕಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 240ರ ಮತದಾರರ ಪಟ್ಟಿಯಲ್ಲಿ ಗೌರಮ್ಮ ಹೆಸರಿನ ಮೂವರು ಮತದಾರರಿದ್ದಾರೆ. ಕ್ರಮ ಸಂಖ್ಯೆ 1ರಲ್ಲಿ ದಾಖಲಾಗಿರುವ ಗೌರಮ್ಮ ಕೋಂ ಕೆಂಪೇಗೌಡ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿಯಾಗಿದ್ದು, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಸಂಬಂಧ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ಹೇಳಿದ್ದಾರೆ.

ಅದೇ ಹೆಸರಿನ ಇತರ ಇಬ್ಬರು ಮತದಾರರಿಗೆ (ಕ್ರಮಸಂಖ್ಯೆ 02 ಮತ್ತು 03) ನೋಟಿಸ್ ನೀಡಲಾಗಿದೆ. ಇದನ್ನೇ ತಪ್ಪಾಗಿ ಅರ್ಥೈಸಿ ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.