ರಾಜ್ಯ

ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ANF ನಿಯೋಜನೆ: DCM ಪರಮೇಶ್ವರ್

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದರೂ, ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿಲ್ಲ.

ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ANF ನಿಯೋಜನೆ: DCM ಪರಮೇಶ್ವರ್
ಡಾ ಜಿ ಪರಮೇಶ್ವರ್
Published On :

ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ವರದಿಗಳು ದೃಢಪಟ್ಟರೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.

ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ಪೋಸ್ಟರ್‌ಗಳು ಕಾಣಿಸಿಕೊಂಡಿರುವ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬೆಳವಣಿಗೆಯನ್ನು ಗಮನಿಸಿದ್ದು, ಶುಕ್ರವಾರ ತುಮಕೂರು ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಈ ಕುರಿತು ಚರ್ಚಿಸುವುದಾಗಿ ಹೇಳಿದರು.

ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ಇರುವುದು ದೃಢಪಟ್ಟರೆ, ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದರೂ, ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿಲ್ಲ. ಈ ಪಡೆಯ ಅರ್ಧದಷ್ಟು ಸಿಬ್ಬಂದಿಯನ್ನು ಕೋಮು ಗಲಭೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಪಡೆಗೆ (ಎಸ್‌ಎಎಫ್) ಪರಿವರ್ತಿಸಲಾಗಿದ್ದು, ಉಳಿದ ಸಿಬ್ಬಂದಿ ನಕ್ಸಲ್ ನಿಗ್ರಹ ಘಟಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಒಂದು ವೇಳೆ ವರದಿಯಂತೆ ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ತುಮಕೂರಿಗೆ ನಕ್ಸಲ್ ನಿಗ್ರಹ ಪಡೆಯನ್ನು ಕರೆತರಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.