ಮೋದಿಯವರ 56 ಇಂಚಿನ ಎದೆಗಾರಿಕೆ ಕಾಂಗ್ರೆಸ್ ಪಕ್ಷದ ವಿರುದ್ಧ ತೋರಿಸುವುದಕ್ಕಷ್ಟೇ ಸೀಮಿತವೇ? RSS ಹಿಟ್ಲಿಸ್ಟ್ನಲ್ಲಿ ನಾನೇ ಮೊದಲು: ಪ್ರಿಯಾಂಕ್ ಖರ್ಗೆ; Video
ಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯ.

ಬೆಂಗಳೂರು: ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ ಭಾರತದ ವಿದೇಶಾಂಗ ನೀತಿಯ ವೈಫಲ್ಯಗಳ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಂದೇ ಮಾತರಂ ಗೀತೆಯ 2 ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, 1937ರಲ್ಲೇ ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ 8 ಜನ ರಾಷ್ಟ್ರನಾಯಕರು ಸಭೆ ಸೇರಿ ಎರಡು ಚರಣಗಳನ್ನು ಹಾಡಲು ನಿರ್ಧರಿಸಿದ್ದರು. ಇವರಿಗಿಂತ ದೊಡ್ಡವರು ಬಿಜೆಪಿಯವರಾ ಎಂದು ಪ್ರಶ್ನಿಸಿದರು.
ಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೊಡುಗೆ ಶೂನ್ಯ.
ನೇತಾಜಿ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೇನೆ ಕಟ್ಟುತ್ತಿದ್ದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಹಾಗೂ ಸಾವರ್ಕರ್ ಬ್ರಿಟಿಷ್ ಸೇನೆಗೆ ಜನರನ್ನು ಸೇರಿಸುತ್ತಿದ್ದರು. ಬ್ರಿಟಿಷರಿಂದ 60 ರೂಪಾಯಿ ಪಿಂಚಣಿ ಪಡೆಯುತ್ತಿದ್ದವರಿಂದ ಇಂದು ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.
ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತಿ. ಇಂತಹ ರೇಡ್ಗಳು ವಿಪಕ್ಷಗಳ ನಾಯಕರ ಮೇಲೆ ಮಾತ್ರ ಯಾಕೆ ನಡೆಯುತ್ತವೆ? ಎಂದು ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಇನ್ನೂ ಹಲವು ಸಚಿವರು ಕಿಕ್ಔಟ್ ಆಗುತ್ತಾರೆ ಎಂಬ ಬಿಜೆಪಿಗರ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಅಧಿವೇಶನದಲ್ಲಿ ಆರೋಪಗಳಿಗೆ ದಾಖಲೆ ನೀಡಿ ಬಿಜೆಪಿಗರು ರಾಜೀನಾಮೆ ಕೇಳಲಿ. ಆರ್‌ಎಸ್‌ಎಸ್ ಮತ್ತು ಬಿಜೆಪಿಗರ ಹಿಟ್ಲಿಸ್ಟ್ನಲ್ಲಿ ನಾನೇ ಮೊದಲ ಸ್ಥಾನದಲ್ಲಿದ್ದೇನೆ. ಅದಕ್ಕೆಲ್ಲ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಅವರು ಬಹಿರಂಗ ಸವಾಲು ಹಾಕಿದ್ದಾರೆ.
ನಮ್ಮ ವಿದೇಶಾಂಗ ಸಚಿವರೇ ದೊಡ್ಡ ಆರ್ಥಿಕತೆ ಜೊತೆ ಜಗಳವಾಡಲು ಸಾಧ್ಯವೇ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಮೋದಿಯವರ 56 ಇಂಚಿನ ಎದೆಗಾರಿಕೆ ಕೇವಲ ಕಾಂಗ್ರೆಸ್ ಪಕ್ಷದ ವಿರುದ್ಧ ತೋರಿಸುವುದಕ್ಕಷ್ಟೇ ಸೀಮಿತವೇ? ದೇಶದ ಶತ್ರುಗಳ ಮುಂದೆ ಆ ಶಕ್ತಿ ಏಕೆ ಕಾಣಿಸುವುದಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



