ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ: ಸರ್ಕಾರಿ ವೈದ್ಯೆ ಡಾ. ಅಂಕಿತಾ ಮಾಡಿದ್ದೇನು?
ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದಾರೆ.

ಬಾಗಲಕೋಟೆ: ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.
ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದರೂ, ಪ್ರತಿ ತಿಂಗಳು ಸರ್ಕಾರದಿಂದ 75,000 ರೂ. ವೇತನ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಡಾ. ಅಂಕಿತಾ ಯರಗಲ್ ಅವರು 2025ರ ಸೆಪ್ಟೆಂಬರ್ನಿಂದ ಬಾಗಲಕೋಟೆಯ ವಾಂಬೆ ಕಾಲೋನಿಯ ‘ನಮ್ಮ ಕ್ಲಿನಿಕ್’ಗೆ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು. ತದನಂತರ, 2026ರ ಮಾರ್ಚ್ನಲ್ಲಿ ಬಾಗಲಕೋಟೆಯ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. (ಪ್ಯಾಥಾಲಜಿ) ಕೋರ್ಸ್ಗೆ ಪ್ರವೇಶ ಪಡೆದು ಏಪ್ರಿಲ್ನಿಂದ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.
ನಿಯಮಗಳ ಪ್ರಕಾರ ಬೆಳಗ್ಗೆ 9 ರಿಂದ ಸಂಜೆ 4:30 ರವರೆಗೆ ನಮ್ಮ ಕ್ಲಿನಿಕ್ನಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಂಕಿತಾ, ಕಾಲೇಜಿನಲ್ಲಿ ಪೂರ್ಣಾವಧಿ ಶಿಕ್ಷಣ ಪಡೆಯುತ್ತಿರುವುದರಿಂದ ಕ್ಲಿನಿಕ್ಗೆ ಸರಿಯಾಗಿ ಹಾಜರಾಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಸಿಗದೆ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ ಬಹುತೇಕ ಬಂದ್ ಆದ ಸ್ಥಿತಿಯಲ್ಲಿದೆ.
ಸರ್ಕಾರಿ ನಿಯಮಾವಳಿ ಪ್ರಕಾರ ಎಂ.ಡಿ. ವ್ಯಾಸಂಗ ಮಾಡುತ್ತಾ ಸರ್ಕಾರಿ ಸೇವೆಯ ವೇತನ ಪಡೆಯುವುದು ಕಾನೂನುಬಾಹಿರವಾಗಿದೆ. ಈ ಬಗ್ಗೆ ಡಾ. ರಾಜಕುಮಾರ ಯರಗಲ್ ಮಾತ್ರ ನುಣುಚಿಕೊಳ್ಳೋ ಕೆಲಸ ಮಾಡುತ್ತಿದ್ದಾರೆ.
ಇನ್ನು ಆರೋಗ್ಯ ಇಲಾಖೆ ಸಹ ಈ ಬಗ್ಗೆ ಮೌನವಾಗಿದ್ದು, ಇಷ್ಟೆಲ್ಲ ಅಕ್ರಮ ಬಯಲಾದ್ರೂ ಡಿಎಚ್ಓ ಯರಗಲ್ ವಿರುದ್ಧವಾಗಲಿ ಅಥವಾ ಅವರ ಮಗಳ ವಿರುದ್ಧವಾಗಲಿ ಯಾವುದೇ ಕ್ರಮ ಜರುಗಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



