ರಾಜ್ಯ

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ 5 ತಿಂಗಳ ಗರ್ಭಿಣಿ ಪತ್ತೆ; ಪತಿ ಬಂಧನ

ಮುನಿಲಕ್ಷ್ಮಿ ಅವರ ತಾಯಿ ಬೈರಮ್ಮ ಅವರು, ಮಗಳ ಪತಿ ಶಂಕರಯ್ಯ, ಅತ್ತೆ ಭಾಗ್ಯಮ್ಮ ಹಾಗೂ ಇತರ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ 5 ತಿಂಗಳ ಗರ್ಭಿಣಿ  ಪತ್ತೆ; ಪತಿ ಬಂಧನ
ಸಾಂದರ್ಭಿಕ ಚಿತ್ರ
Published On :

ರಾಮನಗರ: ರಾಮನಗರ ಜಿಲ್ಲೆಯ ಕೆಂಪಯ್ಯನದೊಡ್ಡಿ ಗ್ರಾಮದಲ್ಲಿರುವ ತಮ್ಮ ಪತಿಯ ಮನೆಯಲ್ಲಿ ಐದು ತಿಂಗಳ ಗರ್ಭಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಸೋಮವಾರ ಸಾವನ್ನಪ್ಪಿದ್ದರು. ಮೃತ ಮಹಿಳೆಯನ್ನು 19 ವರ್ಷದ ಮುನಿಲಕ್ಷ್ಮಿ ಎಂದು ಗುರುತಿಸಲಾಗಿದೆ.

ಇವರಿಗೆ 10 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಮುನಿಲಕ್ಷ್ಮಿ ಅವರ ತಾಯಿ ಬೈರಮ್ಮ ಅವರು, ಮಗಳ ಪತಿ ಶಂಕರಯ್ಯ, ಅತ್ತೆ ಭಾಗ್ಯಮ್ಮ ಹಾಗೂ ಇತರ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ತನ್ನ ಮಗಳಿಗೆ ಪತಿ ಮತ್ತು ಅತ್ತೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ದೂರುದಾರರು ಆರೋಪಿಸಿದ್ದಾರೆ.

ಟ್ರಾಕ್ಟರ್ ಸಾಲ ತೀರಿಸಲು ಹಣದ ಅಗತ್ಯವಿದೆ ಎಂದು ಹೇಳಿ, ಶಂಕರಯ್ಯ ಮತ್ತು ಭಾಗ್ಯಮ್ಮ ಮುನಿಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ತವರು ಮನೆಯಿಂದ 1 ಲಕ್ಷ ರೂಪಾಯಿ ತರುವಂತೆ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ಅದಕ್ಕಾಗಿ ಆಕೆಯ ಪೋಷಕರು 50,000 ರೂ. ಸಾಲ ಮಾಡಿ ನೀಡಿದ್ದರು ಮತ್ತು ಜಾನುವಾರುಗಳನ್ನು ಮಾರಾಟ ಮಾಡಿ ಒಟ್ಟು 1 ಲಕ್ಷ ರೂ. ಹೊಂದಿಸಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ವರದಕ್ಷಿಣೆ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.