ರಾಜ್ಯ

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಂಕಾ, ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿ ಹಗರಣದ ವಿರುದ್ಧ ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ
ಅಶುತೋಷ್ ರಾಂಕಾ
Published On :

ಬೆಂಗಳೂರು: "ಕರ್ನಾಟಕವಷ್ಟೇ ಅಲ್ಲ, ಇಡೀ ದೇಶದಲ್ಲೇ ಇನ್ನು ಮುಂದೆ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಸಹಿಸುವುದಿಲ್ಲ" ಎಂದು 'ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)'ದ ರಾಷ್ಟ್ರೀಯ ಸಹ ಸಂಚಾಲಕ ಅಶುತೋಷ್ ರಾಂಕಾ ಅವರು ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಂಕಾ, ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿ ಹಗರಣದ ವಿರುದ್ಧ ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.

"ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿರುವ ಸಾಲು ಸಾಲು ಅಕ್ರಮಗಳ ಬಗ್ಗೆ ಸಾಕಷ್ಟು ಯುವಕರು ನೇರವಾಗಿ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಹಗರಣದ ಕುರಿತು ಪ್ರಸ್ತುತ ಎಲ್ಲ ಮೂಲಗಳಿಂದ ಸಂಪೂರ್ಣ ಮಾಹಿತಿಯನ್ನ ಕಲೆಹಾಕಲಾಗುತ್ತಿದೆ. ಅನ್ಯಾಯಕ್ಕೊಳಗಾದ, ಪರೀಕ್ಷೆ ಬರೆದು ವಂಚನೆಗೆ ಒಳಗಾದ ಮತ್ತು ನೊಂದ ವಿದ್ಯಾರ್ಥಿಗಳ ಜೊತೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದೇವೆ" ಎಂದು ರಾಂಕಾ ತಿಳಿಸಿದ್ದಾರೆ.

ಈ ಅನ್ಯಾಯದ ವಿರುದ್ಧ ಸಿಜೆಪಿ ವತಿಯಿಂದ ಕಾನೂನು ಹೋರಾಟ ಮತ್ತು ಬೀದಿಗಿಳಿದು ಪ್ರತಿಭಟನೆ ನಡೆಸುವ ಕ್ರಮಗಳನ್ನ ಕೈಗೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಅರ್ಹ ಮತ್ತು ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಿಜೆಪಿ ಮುಖಂಡರು ಕೆಪಿಎಸ್‌ಸಿ ಹಗರಣದ ವಿರುದ್ಧ ಹೋರಾಟ ರೂಪಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಕೇವಲ ನೇಮಕಾತಿ ಹಗರಣ ಮಾತ್ರವಲ್ಲದೆ, ರಾಜ್ಯದ ಸರ್ಕಾರಿ ಶಾಲೆಗಳ ಶೋಚನೀಯ ದುಸ್ಥಿತಿಯ ಬಗ್ಗೆಯೂ ಸಿಜೆಪಿ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯದಾದ್ಯಂತ ಇರುವ ಸುಮಾರು 48,500 ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಹಾಗೂ ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸುವ ನಿಟ್ಟಿನಲ್ಲಿ ಸಿಜೆಪಿ ವತಿಯಿಂದ ಸಮಗ್ರ ತಪಾಸಣೆ ಕಾರ್ಯವನ್ನ ಕೈಗೆತ್ತಿಕೊಳ್ಳಲಾಗುವುದು ಎಂದು ರಾಂಕಾ ಹೇಳಿದ್ದಾರೆ.

ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾಗಿರುವ ಶೌಚಾಲಯ, ಗಾಳಿ, ಬೆಳಕು ಮತ್ತು ಗುಣಮಟ್ಟದ ಶಿಕ್ಷಣದಂತಹ ಸೌಲಭ್ಯಗಳ ಪರಿಶೀಲನೆಗಾಗಿ ಮುಂದಿನ ಮೂರು ದಿನಗಳೊಳಗೆ ಪ್ರತ್ಯೇಕ ಜಿಲ್ಲಾ ಮಟ್ಟದ ಸಮಿತಿಗಳನ್ನ ರಚಿಸಲಾಗುವುದು ಎಂದು ರಾಂಕಾ ತಿಳಿಸಿದ್ದಾರೆ.watch

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.