ಗಣೇಶ ಮೂರ್ತಿ ವಿಸರ್ಜನೆ: ಬೆಂಗಳೂರಿನಾದ್ಯಂತ 659 ಸಂಚಾರಿ ಟ್ಯಾಂಕರ್, 42 ಶಾಶ್ವತ ಟ್ಯಾಂಕ್‌ಗಳ ವ್ಯವಸ್ಥೆ
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡಲು ಹಾಗೂ ವ್ಯವಸ್ಥೆಗಳ ಉಸ್ತುವಾರಿ ವಹಿಸಲು ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ.
ಬೆಂಗಳೂರು: ನಗರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್‌ಗಳಲ್ಲಿ, ಮನೆಗಳ ಸಮೀಪವೇ ಗಣೇಶ ಮೂರ್ತಿ ವಿಸರ್ಜನೆಗಾಗಿ, 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' (GBA) 42 ಶಾಶ್ವತ ವಿಸರ್ಜನಾ ಟ್ಯಾಂಕ್‌ಗಳು ಮತ್ತು 659 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡಲು ಹಾಗೂ ವ್ಯವಸ್ಥೆಗಳ ಉಸ್ತುವಾರಿ ವಹಿಸಲು ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ.
ಸಾರ್ವಜನಿಕರು ಮೂರ್ತಿ ವಿಸರ್ಜನಾ ಸ್ಥಳಗಳು, ಮೊಬೈಲ್ ಟ್ಯಾಂಕ್‌ಗಳು, ಏಕಗವಾಕ್ಷಿ ಕೇಂದ್ರಗಳು ಮತ್ತು ಸಂಬಂಧಿತ ವ್ಯವಸ್ಥೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಅಥವಾ GBA ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಗಣೇಶ ವಿಸರ್ಜನಾ ಲಿಂಕ್‌ಗೆ ಭೇಟಿ ನೀಡುವ ಮೂಲಕ ಪಡೆಯಬಹುದು.
ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯಲ್ಲಿ 161 ಮೊಬೈಲ್ ಟ್ಯಾಂಕರ್ಸ್‌ಗಳು ಮತ್ತು 09 ವಿಸರ್ಜನಾ ಟ್ಯಾಂಕ್‌ಗಳನ್ನು ಒದಗಿಸಲಾಗಿದೆ. ಕೇಂದ್ರ ಮಹಾನಗರ ಪಾಲಿಕೆಯಲ್ಲಿ 146 ಮೊಬೈಲ್ ಟ್ಯಾಂಕರ್‌ಗಳು, 01 ವಿಸರ್ಜನಾ ಟ್ಯಾಂಕ್ ಅನ್ನು ಇಡಲಾಗಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


