ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ; Video
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ.

ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಸಂಭವಿಸಿದೆ.
ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಪ್ರಿಯಾ ಗಜಾನನ ದಮೋನೆ (28) ಮತ್ತು ಗಂಗಾ ಗಜಾನನ ದಮೋನೆ (25) ಎಂದು ತಿಳಿದುಬಂದಿದೆ.
ತಡರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮನೆಯೊಳಗಿನ ಅಡುಗೆಮನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



