ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್; Video
ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ಎಂಜಿನಿಯರ್ ಗಳಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಇನ್ನು ಮುಂದೆ ಸರ್ಕಾರ ಎಂಜಿನಿಯರ್ ದಿನ ಆಚರಿಸಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಮಳೆ ಕೊರತೆಯ ವಿಚಾರವನ್ನು ರಾಜಕೀಯಗೊಳಿಸುವ ಮೂಲಕ ಪ್ರತಿಭಟನೆ ನಡೆಸುವುದು ಅಥವಾ ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸುವುದನ್ನು ರಾಜಕೀಯ ಪಕ್ಷಗಳು ತಪ್ಪಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಮನವಿ ಮಾಡಿದರು.
ರೈತರಿಗೆ ಭರವಸೆ ನೀಡಿದ ಮುಖ್ಯಮಂತ್ರಿ, ಈ ಸಂಕಷ್ಟದ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ, ರಾಜಕೀಯ ಮಾಡುವುದು ಬೇಡ, ಶಾಸಕರು ಆತಂಕಪಡುವುದು ಬೇಡ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ವಿಪರೀತ ಬರಗಾಲ, ಕುಡಿಯುವ ನೀರಿಗೂ ತತ್ವರ, ವಿದ್ಯುಚ್ಛಕ್ತಿ ಕೊರತೆ ಬರುವ ಸಾಧ್ಯತೆಯಿದೆ, ಹಾಗೆಂದು ರೈತರು ಆತಂಕಗೊಳ್ಳುವುದು ಬೇಡ, ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ, ರೈತರ ಸಮಸ್ಯೆಗಳನ್ನು ಅರಿತುಕೊಳ್ಳಲೆಂದೇ ವಿಶೇಷ ಸಚಿವ ಸಂಪುಟ ಸಭೆ ಕರೆಯುತ್ತಿದ್ದೇನೆ, ರೈತರ ಜೊತೆ ಚರ್ಚೆ ಮಾಡಿ ಕೆಲವು ಘೋಷಣೆಗಳನ್ನು ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಇಂಜಿನಿಯರ್‌ಗಳ ದಿನಾಚರಣೆಗೆ ಅಧಿಕೃತ ಆದೇಶ
ಇಂದು ಎಂಜಿನಿಯರ್ಗಳ ದಿನಾಚರಣೆ ಹಿನ್ನೆಲೆಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಸರ್ಕಾರದ ಪರವಾಗಿ ಗೌರವ ಸಲ್ಲಿಸುತ್ತಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಎಂಜಿನಿಯರ್ಗಳು ಈ ದೇಶದ ದೊಡ್ಡ ಆಸ್ತಿ. ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ ಮತ್ತು ನಮ್ಮ ಎಲ್ಲ ಎಂಜಿನಿಯರ್ಗಳು ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಹಾನ್ ಆದರ್ಶಪ್ರಾಯರು. ನಮ್ಮ ರಾಜ್ಯಕ್ಕೆ ಅವರ ಕೊಡುಗೆ ಅಪಾರ. ಎಂಜಿನಿಯರ್ಗಳ ದಿನವನ್ನು ಸರ್ಕಾರವೇ ಆಚರಿಸಬೇಕು ಎಂಬ ಬೇಡಿಕೆಯನ್ನು ಅವರೇ ಮುಂದಿಟ್ಟಿದ್ದರು ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಪ್ರತಿವರ್ಷ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರ್ಗಳು ಪದವಿ ಪಡೆಯುತ್ತಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಎಂಜಿನಿಯರ್ಗಳನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿದರು.
ಎಂಜಿನಿಯರಿಂಗ್ ಸಮುದಾಯಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ರಾಜ್ಯಾದ್ಯಂತ ಎಂಜಿನಿಯರ್ಗಳ ದಿನಾಚರಣೆಯನ್ನು ಅಧಿಕೃತವಾಗಿ ಗುರುತಿಸುವ ಸರ್ಕಾರಿ ಆದೇಶವನ್ನು ತಕ್ಷಣವೇ ಹೊರಡಿಸಲಾಗುವುದು ಎಂದು ತಿಳಿಸಿದರು.
ಸರ್ಕಾರದಿಂದ ಎಂಜಿನಿಯರ್ ದಿನ ಆಚರಣೆ
ನಮ್ಮ ರಾಜ್ಯದಲ್ಲಿ ಪ್ರತಿವರ್ಷ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರ್ಗಳು ಹೊರಬರುತ್ತಿದ್ದಾರೆ. ಭಾರತದಲ್ಲಿರುವ ಎಂಜಿನಿಯರ್ಗಳ ಸಂಖ್ಯೆಯನ್ನು ಗಮನಿಸಿದರೆ, ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ಎಂಜಿನಿಯರ್ ಗಳಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ.
ಹೀಗಾಗಿ ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಇನ್ನು ಮುಂದೆ ಸರ್ಕಾರ ಎಂಜಿನಿಯರ್ಗಳ ದಿನವನ್ನು ಆಚರಿಸಲಿದೆ ಎಂದು ನಾನು ನಿರ್ಧರಿಸಿದ್ದೇನೆ. ಇಂದು ಈ ಕುರಿತು ಆದೇಶ ಹೊರಡಿಸುತ್ತಿದ್ದೇನೆ. ರಾಜ್ಯದ ಎಲ್ಲ ಎಂಜಿನಿಯರ್ಗಳು ಇದನ್ನು ಗಮನಿಸಬೇಕು. ನಿಮಗೆ ಗೌರವ ನೀಡುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ತಿಳಿಸಿದರು.
ಗಣೇಶೋತ್ಸವದಲ್ಲಿ ರಾಜಕೀಯ ಬೇಡ
ಗಣೇಶೋತ್ಸವ ಆಚರಣೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುವುದು ಬೇಡ, ಪೊಲೀಸರು ಏನು ತಪ್ಪು ಮಾಡಿದರು, ಪೊಲೀಸರು ಎಂದ ಮೇಲೆ ಭಯ-ಭಕ್ತಿ ಎರಡೂ ಬೇಕು. ನರಸೀಪುರ ಘಟನೆಯಲ್ಲಿ ಪೊಲೀಸರೇನು ತಪ್ಪು ಮಾಡಿದರು, ಪೊಲೀಸರ ಭಾಷೆಯಲ್ಲಿ ಮುಂದೆ ತಪ್ಪುಗಳಾಗಬಾರದೆಂದು ಎಚ್ಚರಿಕೆ ಮಾತುಗಳನ್ನಾಡಿದ್ದಾರೆ. ವಿರೋಧ ಪಕ್ಷದ ನಾಯಕರು ಮೈಸೂರು ಮಹಾರಾಜರನ್ನು ಕೂಡ ಕರೆದುಕೊಂಡು ಹೋಗಿ ರಸ್ತೆಯಲ್ಲಿ, ಪೊಲೀಸ್ ಠಾಣೆಯಲ್ಲಿ ಹೇಳಿಕೆ ಕೊಡಿಸಿ ಯಾಕೆ ಇಷ್ಟೊಂದು ಕೆಳಮಟ್ಟಕ್ಕೆ ಹೋಗಿದ್ದಾರೆ ಎಂದು ಕೇಳಿದರು.
ಪಂಚಾಯತಿ ಮಟ್ಟದಲ್ಲಿ ನಡೆಯುವ ಕೆಲಸಗಳನ್ನು ಇಷ್ಟೊಂದು ದೊಡ್ಡ ಮಟ್ಟಕ್ಕೆ ಎತ್ತರಿಸಿದ್ದಾರೆ. ಜನರನ್ನು ಪ್ರಚೋದನೆ ಮಾಡುವ ಕೆಲಸ ಮಾಡಿ ಬಿಜೆಪಿಯವರು ಅಶಾಂತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



