ರಾಜ್ಯ

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!

ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ.

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!
ಬಿಜೆಪಿ ಶಾಸಕ ಚೆನ್ನಬಸಪ್ಪ
Published On :

ಶಿವಮೊಗ್ಗ: ಯೂನಿಫಾರ್ಮ್ ನಲ್ಲಿದ್ದ ಪೊಲೀಸ್ ಸಿಬ್ಬಂದಿ, ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಈ‌ ಆದೇಶ ಹೊರಡಿಸಿದ್ದಾರೆ.

ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಬಳಿ ಸಾಗುತ್ತಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರು ಭಾಗಿಯಾಗಿದ್ದರು. ಈ ವೇಳೆ ಶಾಸಕರನ್ನ ಹೊತ್ತು ಕುಣಿದ ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಗಣೇಶ್ ಹಾಗೂ ಪ್ರಕಾಶ್.ಎ.ಕೆ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

ಗಣೇಶ್ ರನ್ನ ತೀರ್ಥಹಳ್ಳಿಯ ಆಗುಂಬೆ ಪೊಲೀಸ್ ಠಾಣೆಗೆ, ಪ್ರಕಾಶ್.ಎ.ಕೆ ರನ್ನ ಸೊರಬದ ಆನವಟ್ಟಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲು ಎಸ್ಪಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಗಣಪತಿಯನ್ನ ಪ್ರತಿಷ್ಟಾಪಿಸಲಾಗಿತ್ತು. ಪೂಜೆಯ ಬಳಿಕ ಅದೇ ದಿನ ಸಂಜೆ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆಗೆ ಮೆರವಣಿಗೆ ನಡೆಸಲಾಗಿತ್ತು.

ಪೂರ್ವ ಸಂಚಾರಿ ಪೊಲೀಸ್ ಠಾಣೆಯಿಂದ ತುಂಗಾ ನದಿಯ ಭೀಮನಮಡು ಕಡೆಗೆ ಸಾಗುತ್ತಿದ್ದ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪರನ್ನ ಟ್ರಾಫಿಕ್ ಠಾಣೆ ಪೊಲೀಸ್ ಸಿಬ್ಬಂದಿ ಹೊತ್ತು ಕುಣಿದಿದ್ದರು. ಯೂನಿಫಾರ್ಮ್ ನಲ್ಲಿದ್ದ ಪೊಲೀಸ್ ಸಿಬ್ಬಂದಿ, ಶಾಸಕರ ಹೊತ್ತು ಕುಣಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುವ ಜೊತೆಗೆ ಶಿವಮೊಗ್ಗದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.