ರಾಜ್ಯ

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣ ಸಂಬಂಧ ಜೈಲು ಸೇರಿರುವ ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ​ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು
ಬಿ ಕೆ ಹರಿಪ್ರಸಾದ್, ಉಮರ್ ಖಾಲಿದ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: 2020ರ ದೆಹಲಿ ಗಲಭೆ ಪ್ರಕರಣ ಸಂಬಂಧ ಜೈಲು ಸೇರಿರುವ ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಎಬಿವಿಪಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಿರುದ್ಧ​ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ದೆಹಲಿಯಲ್ಲಿ ಗಲಭೆ ಎಬ್ಬಿಸಿದವನ ಪರ ಮಾತನಾಡುತ್ತಾರೆ. ಸಮಾಜದಲ್ಲಿ ದ್ವೇಷ ಮೂಡುವಂತ ಹೇಳಿಕೆ ನೀಡಿದ್ದಾರೆ. ಅಲ್ಲದೆ ಎಬಿವಿಪಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬಿಕೆ ಹರಿಪ್ರಸಾದ್ ವಿರುದ್ಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಒಬ್ಬ ಭಯೋತ್ಪಾದಕನ ಬಗ್ಗೆ ವಿಧಾನಸೌಧದಲ್ಲಿ ನಿಂತು ಬಿಕೆ ಹರಿಪ್ರಸಾದ್ ಹೇಳಿಕೆ ನೀಡುತ್ತಿದ್ದಾರೆ ಎಂದು ತೇಜಸ್ ಗೌಡ ಹೇಳಿದ್ದಾರೆ. ಭಯೋತ್ಪಾದಕರ ಬಗ್ಗೆ ಮಾತನಾಡುವವರು ಭಯೋತ್ಪಾದಕರಿಗೆ ಸಮ ಎಂದು ತೇಜಸ್ ಗೌಡ ಹೇಳಿದ್ದು ಪೊಲೀಸರು ಕಾನೂನು ತಜ್ಞರ ಸಲಹೆ ಪಡೆದು ಕ್ರಮಕೈಗೊಳ್ಳುತ್ತೇನೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.