ರಾಜ್ಯ

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು! Video

ವರ್ಷಾ ಎಂದು ಗುರುತಿಸಲಾದ ಈ ಯುವತಿ, ಸೆಪ್ಟೆಂಬರ್ 11 ರಂದು ತಮ್ಮ ಸೋದರಸಂಬಂಧಿ ಮತ್ತು ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಸಕಲೇಶಪುರದ ಲಾಡ್ಜ್‌ಗೆ ಆಗಮಿಸಿದ್ದರು ಎನ್ನಲಾಗಿದೆ.

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು! Video
ಮೃತಪಟ್ಟ ಯುವತಿ
Published On :

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರದ ಲಾಡ್ಜ್‌ವೊಂದರಲ್ಲಿ ಬೆಂಗಳೂರಿನ 23 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.

ಚಾಕೊಲೇಟ್ ತಿಂದ ನಂತರ ಕುಸಿದು ಬಿದ್ದು ಆಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವರ್ಷಾ ಎಂದು ಗುರುತಿಸಲಾದ ಈ ಯುವತಿ, ಸೆಪ್ಟೆಂಬರ್ 11 ರಂದು ತಮ್ಮ ಸೋದರಸಂಬಂಧಿ ಮತ್ತು ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಸಕಲೇಶಪುರದ ಲಾಡ್ಜ್‌ಗೆ ಆಗಮಿಸಿದ್ದರು ಎನ್ನಲಾಗಿದೆ.

ಸ್ನಾನಕ್ಕೆ ಹೋಗುವ ಮುನ್ನ ಆಕೆ ಚಾಕೊಲೇಟ್ ತಿಂದಿದ್ದರು. ಸ್ನಾನಗೃಹದ ಕಡೆಗೆ ನಡೆಯುತ್ತಿದ್ದಾಗ ಆಕೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು ಎಂಬ ಮಾಹಿತಿ ಸಿಕ್ಕಿದೆ ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ತಿಳಿಸಿದ್ದಾರೆ. ಪ್ರವಾಸದ ವೇಳೆ ಅವರೊಂದಿಗೆ ಇದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನಿಂದ ಸುಮಾರು 190 ಕಿಲೋಮೀಟರ್ ದೂರದಲ್ಲಿರುವ ಹಾಸನಕ್ಕೆ ವರ್ಷಾ ತೆರಳಿದ್ದ ವಿಷಯ ಅವರ ಪೋಷಕರಿಗೆ ತಿಳಿದಿತ್ತು. ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸಾವಿಗೆ ನಿಖರ ಕಾರಣವನ್ನು ತಿಳಿಯಲು ವರ್ಷಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.