Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಕೊನೆಯ ದಿನಾಂಕ ಯಾವಾಗ?
Ration Card e-KYC Deadline: ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ದಿನಂಪ್ರತಿ ತಮ್ಮ ಕೆಲಸ ಕಾರ್ಯ ಬಿಟ್ಟು ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಜೊತೆಗೆ, ಈ ಸಮಸ್ಯೆಗೆ ಶೀಘ್ರದಲ್ಲೇ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಇ-ಕೆವೈಸಿ ಮಾಡಲು ಸರ್ಕಾರ ಹೊಸ ಯೋಜನೆ ಸಿದ್ದಪಡಿಸುತ್ತಿತ್ತು. ಆದರೆ, ಅದಕ್ಕೆ ಇನ್ನೂ ಒಂದು ವಾರದ ಸಮಯ ಬೇಕಿತ್ತು. ಅಷ್ಟರಲ್ಲಿ, ಈ ಇ-ಕೆವೈಸಿ ಮಾಡಿಸಲು, ಹೆಚ್ಚೆಂದರೆ ಒಂದು ವಾರ ಉಳಿತಿತ್ತೇನೋ! ಆದರೆ, ಸಮಸ್ಯೆ ಬೇಗ ಪರಿಹಾರವಾಗುತಿರಲಿಲ್ಲ.! ಈ ಕಾರಣದಿಂದ ಕರ್ನಾಟಕ ಸರ್ಕಾರ, ರಾಜ್ಯದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ ಟೈಮ್ ವಿಸ್ತರಣೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ಇ-ಕೆವೈಸಿ ಕಡ್ಡಾಯ ಯಾಕೆ?
ಕೇಂದ್ರ ಸರ್ಕಾರದ ನಿಯಮದಂತೆ ಪ್ರತಿ 5 ವರ್ಷಕ್ಕೊಮ್ಮೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾಗಿ, ರಾಜ್ಯದ ಸುಮಾರು 2.67 ಕೋಟಿ ಫಲಾನುಭವಿಗಳು ಇ-ಕೆವೈಸಿ ಮಾಡಿಸದಿದ್ದರೆ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಇ-ಕೆವೈಸಿ ಮಾಡಿಸಲು ಯಾವೆಲ್ಲಾ ದಾಖಲೆಗಳು ಬೇಕು?
ಕುಟುಂಬದ ಸದಸ್ಯರ ಮೂಲ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ, ಆಧಾರ್‌ಗೆ ಲಿಂಕ್ ಆದ ಮೊಬೈಲ್ ಸಂಖ್ಯೆ ಹಾಗೂ ಎಲ್‌ಪಿಜಿ ಗ್ಯಾಸ್ ಸಂಪರ್ಕದ ವಿವರಗಳು (ಜಾತಿ ಪ್ರಮಾಣಪತ್ರ ಕೇವಲ SC/ST ಫಲಾನುಭವಿಗಳಿಗೆ ಮಾತ್ರ).
APL-BPL ಕಾರ್ಡ್ ಇ-ಕೆವೈಸಿಗೆ ಹೊಸ ಡೆಡ್ಲೈನ್!
ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿದ್ದ ತೀವ್ರ ಸರ್ವರ್ ಸಮಸ್ಯೆ ಹಾಗೂ ಸಾರ್ವಜನಿಕರ ದಟ್ಟಣೆಯ ಕಾರಣದಿಂದ ರಾಜ್ಯದಲ್ಲಿ . ಇನ್ನೂ ಕೋಟಿಗೂ ಅಧಿಕ ಪಡಿತರ ಚೀಟಿಗಳಿಗೆ ಇ-ಕೆವೈಸಿ ಬಾಕಿ ಇದೆ ಎನ್ನಲಾಗಿದೆ. ಹಾಗಾಗಿ, ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



